ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ : ದೂರು ದಾಖಲು

ಹುಬ್ಬಳ್ಳಿ:

    ವಿಮಾನ ನಿಲ್ದಾಣ, ಶಾಲೆಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಿಗೆ ಬಾಂಬ್ ಬೆದರಿಕೆ ಕರೆಗಳು, ಇ ಮೇಲ್ ಸಂದೇಶಗಳು ಬರುವುದು ಹೆಚ್ಚಾಗುತ್ತಿದೆ. ಎರಡು ದಿನದ ಹಿಂದೆಯಷ್ಟೇ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕರಿಗೆ ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್ ಬಂದಿದೆ.

   ವಿಮಾನ ನಿಲ್ದಾಣ ನಿರ್ದೇಶಕ ರೂಪೇಶ್​​​​ ಕುಮಾರ್​​​​ಗೆ ಅನಾಮಧೇಯ ವ್ಯಕ್ತಿಯೊಬ್ಬನಿಂದ ಇ-ಮೇಲ್​ ಮೂಲಕ ಜೀವಬೆದರಿಕೆ ಸಂದೇಶ ಬಂದಿದೆ.

   ಲಾಂಗ್​ ಲೀವ್​​​​ ಪ್ಯಾಲೆಸ್ತೇನ್​​​​ ಎಂಬ ಹೆಸರಿನ ಮೇಲ್​ ಐಡಿಯಿಂದ ನಿರ್ದೇಶಕರ ಕಚೇರಿಯ ಮೇಲ್ ಐಡಿಗೆ ಬೆದರಿಕೆ ಸಂದೇಶ ಬಂದಿದೆ. ನಾವು ನಿಮ್ಮನ್ನು ನಾಶ ಮಾಡುತ್ತೇವೆ. ನೀವು ಮಾಡಿದ ಎಲ್ಲ ಕೆಟ್ಟ ಕೆಲಸಗಳಿಗೆ ಉತ್ತರವಿಲ್ಲ ಎಂದು ಭಾವಿಸಿದ್ದೀರ. ಬೆಂಕಿಯಲ್ಲಿ ಎಸೆಯುತ್ತೇವೆ, ಉಸಿರುಗಟ್ಟಿ ಸಾಯುತ್ತೀರ ಎಂದು ಜೀವ ಬೆದರಿಕೆ ಹಾಕಿದ್ದಾರೆ.

    ಇ-ಮೇಲ್ ಸಂದೇಶ ಬಂದ ತಕ್ಷಣವೇ ರೂಪೇಶ್ ಅವರು ಈ ವಿಚಾರವನ್ನು ಟರ್ಮಿನಲ್ ಉಸ್ತುವಾರಿ ಪ್ರತಾಪ್ ಅವರ ಗಮನಕ್ಕೆ ತಂದಿದ್ದಾರೆ. ನಂತರ ಸಿಎಎಸ್‌ಒ, ಐಬಿ, ಬಿಡಿಡಿಎಸ್ ಮತ್ತು ಬಾಂಬ್ ನಿಷ್ಕ್ರಿಯ ದಳಕ್ಕೆ ಮಾಹಿತಿ ರವಾನಿಸಿದ್ದು ವಾಯುಯಾನ ಭದ್ರತಾ ನಿಯಮದ ಪ್ರಕಾರ ಅಗತ್ಯ ಕ್ರಮಗಳನ್ನು ಅಧಿಕಾರಿಗಳು ಕೈಗೊಂಡಿದ್ದಾರೆ. ಈ ಕುರಿತು ಗೋಕುಲ ರೋಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

   ತಕ್ಷಣ ಭದ್ರತಾ ಕ್ರಮಗಳನ್ನು ಕೈಗೊಂಡ ನಂತರ ವಿಮಾನ ನಿಲ್ದಾಣದ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap