ಬೆಳಗಾವಿ:
ರಸ್ತೆ ಪಕ್ಕದಲ್ಲಿ ನಿಂತಿದ್ದ ಕಾರ್ ಮೇಲೆ ಕಾಂಕ್ರಿಟ್ ಮಿಕ್ಸರ್ ಲಾರಿ ಉರುಳಿಬಿದ್ದ ಘಟನೆ ನಡೆದಿದೆ.ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಷದ ಸರ್ವೀಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು. ಕಾಂಕ್ರೀಟ್ ಮಿಕ್ಸರ್ ಲಾರಿ ವೇಗವಾಗಿ ಚಲಿಸುತ್ತಿದ್ದ ವೇಳೆ ಪಕ್ಕದ ಕಾರಿನ ಮೇಲೆ ಉರುಳಿಬಿದ್ದಿದೆ. ಕಾರ್‌ನಲ್ಲಿದ್ದ ಮೂವರು ಗಂಬಿರವಾಗಿ ಗಾಯಗೊಂಡಿದ್ದು ಪಾರಾಗಿದ್ದಾರೆ.
ರಕ್ಷಣಾ ಕಾರ್ಯಾಚರಣೆ ನಡೆಸಿ ಮೂವರನ್ನು ರಕ್ಷಿಸಲಾಗಿದೆ. ಇನ್ನು ಸ್ಥಳಕ್ಕೆ ಧಾವಿಸಿದ ಪೊಲೀಸರು ಗಾಯಾಳುಗಳನ್ನು ರಕ್ಷಿಸುವ ಕಾರ್ಯ ನಡೆಸಿದ್ದಾರೆ. ಕ್ರೇನ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆದಿದೆ. ಒಬ್ಬರನ್ನೂ ಮಾತ್ರ ಹೊರತೆಗೆಯಲಾಗಿದ್ದು. ಇನ್ನಿಬ್ಬರನ್ನು ರಕ್ಷಣೆ ಮಾಡಲು ಪರದಾಟ ನಡೆದಿದೆ, ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
