ತಿಪಟೂರು:
ನಾಡಧ್ವಜ ಕನ್ನಡ ಬಾವುಟವನ್ನು ಸುಟ್ಟು ಹಾಕಿರುವುದು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ವಿರೂಪಗೊಳಿಸಿರುವುದು ಮತ್ತು ಜಗಜ್ಯೋತಿ ಬಸವೇಶ್ವರರ ಭಾವಚಿತ್ರಕ್ಕೆ ಸಗಣಿ ಎರಚಿರುವುದನ್ನು ಖಂಡಿಸಿ, ಈ ಘಟನೆಗೆ ಕಾರಣವಾದವರನ್ನು ಗಡಿಪಾರು ಮಾಡುವಂತೆ ಹಾಗೂ ಬೆಳಗಾವಿಯಲ್ಲಿ ಎಂಇಎಸ್ ಸಂಘಟನೆಯವರು ಪದೆ ಪದೆ ನಾಡದ್ರೋಹಿ ಕೆಲಸಗಳನ್ನು ಮಾಡುತ್ತಿರುವುದನ್ನು ಖಂಡಿಸಿ.
ಈ ಸಂಘಟನೆಯನ್ನು ರಾಜ್ಯದಲ್ಲಿ ಸಂಪೂರ್ಣವಾಗಿ ನಿಷೇಧ ಮಾಡುವಂತೆ ಹಾಗೂ ಎಂಇಎಸ್ ಸಂಘಟನೆಯ ಮುಖಂಡರುಗಳ ಆಸ್ತಿಗಳನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುವಂತೆ ಒತ್ತಾಯಿಸಿ ತಾಲ್ಲೂಕು ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಉಪ ವಿಭಾಗಾಧಿಕಾರಿಗಳ ಕಚೇರಿಯ ತಹಶೀಲ್ದಾರ್ ಕೆ.ಎಲ್.ಪರಮೇಶ್ವರಯ್ಯ ಅವರ ಮುಖಾಂತರ ರಾಜ್ಯ ಪಾಲರಿಗೆ ಮನವಿ ಸಲ್ಲಿಸಲಾಯಿತು.
ನಗರಸಭಾ ಸದಸ್ಯೆ ಡಾ.ಓಹಿಲಾಗಂಗಾಧರ್, ಮಾಜಿ ನಗರಸಭಾ ಸದಸ್ಯ ತರಕಾರಿ ಗಂಗಾಧರ್, ಜಯ ಕರ್ನಾಟಕ ಸಂಘಟನೆಯ ತಾಲ್ಲೂಕು ಅಧ್ಯಕ್ಷ ಬಿ.ಟಿ.ಕುಮಾರ್, ಪ್ರಧಾನ ಕಾರ್ಯದರ್ಶಿ ಸಾರ್ಥವಳ್ಳಿ ಶಿವಕುಮಾರ್, ಸಂಘಟನೆಯ ಜಿಲ್ಲಾ ಯುವ ಘಟಕದ ಉಪಾಧ್ಯಕ್ಷ ಬಿ.ಬಿ.ಬಸವರಾಜ್, ನಗರ ಗೌರವಾಧ್ಯಕ್ಷ ಡಾ.ಭಾಸ್ಕರ್, ಕಾರ್ಯದರ್ಶಿ ಲೋಕೇಶ್, ವಿದ್ಯಾರ್ಥಿ ಘಟಕದ ಅಧ್ಯಕ್ಷ ಖಲಂದರ್, ಉಪಾಧ್ಯಕ್ಷ ಪ್ರಶಾಂತ್, ಕಾರ್ಯದರ್ಶಿ ಯಶ್ವಂತ್, ಸಂಚಾಲಕ ಹೇಮಂತ್ ಹಾಗೂ ತರಕಾರಿ ಗಂಗಾಧರ್ ಸ್ನೇಹ ವೃಂದದ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿ ಘಟಕದ ಪದಾಧಿಕಾರಿಗಳು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ