ನವದೆಹಲಿ:
ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್ ಕೆಲವೊಂದು ಷರತ್ತುಗಳನ್ನು ವಿಧಿಸಿ ಮಧ್ಯಂತ ಜಾಮೀನು ನೀಡಿದೆ.
ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಜೂನ್ 1 ರವರೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ ನಂತರ ಅರವಿಂದ್ ಕೇಜ್ರಿವಾಲ್ ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆ ಯಾಗಲಿದ್ದಾರೆ. ಜೈಲಿನಿಂದ ಹೊರ ಬಂದ ಬಳಿಕ ವಿಧಿಸಿದ ಕಠಿಣ ಷರತ್ತುಗಳ ಪಟ್ಟಿ ಇಲ್ಲಿದೆ
ದೆಹಲಿ ಮುಖ್ಯಮಂತ್ರಿಯು 50,000 ರೂ. ಮೌಲ್ಯದ ಬೇಲ್ ಬಾಂಡ್‌ಗಳನ್ನು ಒದಗಿಸಬೇಕು.
* ಮುಖ್ಯಮಂತ್ರಿ ಕಚೇರಿ ಮತ್ತು ದೆಹಲಿ ಸಚಿವಾಲಯಕ್ಕೆ ಭೇಟಿ ನೀಡುವಂತಿಲ್ಲ.
* ಯಾವುದೇ ಸರ್ಕಾರಿ ಕಡತಗಳಿಗೆ ಸಹಿ ಹಾಕಬಾರದು.
* ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಬಹಿರಂಗ ಹೇಳಿಕೆಗಳನ್ನು ನೀಡಬಾರದು.
* ಪ್ರಕರಣ ಸಂಬಂಧ ಸಾಕ್ಷ್ಯಗಳ ಜೊತೆ ಮಾತುಕತೆ ನಡೆಸಬಾರದು
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ವರೆಗೂ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸಂಜೀವ್ ಖನ್ನಾ ನೇತೃತ್ವದ ದ್ವಿ ಸದಸ್ಯ ಪೀಠ ಚುನಾವಣಾ ಪ್ರಚಾರಕ್ಕಾಗಿ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಚುನಾವಣಾ ಫಲಿತಾಂಶ ಜೂನ್ 4 ರಂದು ಪ್ರಕಟಗೊಳ್ಳಲಿದೆ ಅಲ್ಲಿವರೆಗೂ ಜಾಮೀನು ವಿಸ್ತರಿಸಬೇಕು ಎಂದು ಕೇಜ್ರಿವಾಲ್ ಪರ ವಕೀಲ ಅಭಿಷೇಕ್ ಮನುಸಿಂಘ್ವಿ ಮನವಿ ಮಾಡಿದರು. ಇದಕ್ಕೆ ನಿರಾಕರಿಸಿದ ಕೋರ್ಟ್, ಕಡೆಯ ಹಂತದ 48 ಗಂಟೆಗೂ ಮುನ್ನ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಜೂನ್ 31 ರ ಪ್ರಚಾರಕ್ಕೆ ಕಡೆಯ ದಿನವಾಗಿದ್ದು ಈ ಹಿನ್ನೆಲೆ ಜೂನ್ 1 ವರೆಗೂ ಜಾಮೀನು ಮಂಜೂರು ಮಾಡಿದೆ ಎಂದು ಕೋರ್ಟ್ ಸ್ಪಷ್ಟಪಡಿಸಿತು. ಅಲ್ಲದೇ ಜೂನ್ 2 ರಂದು ಬಂದು ಶರಣಾಗುವಂತೆ ಕೋರ್ಟ್ ಸೂಚಿಸಿದೆ.