ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸುಕೊಳ್ಳುತ್ತಿದೆ : ಕಾಂಗ್ರೆಸ್

ಬೆಂಗಳೂರು:

    ಕೇಂದ್ರ ಮೋದಿ ಸರ್ಕಾರ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ಕಾಂಗ್ರೆಸ್ ಪಕ್ಷದ ಖಾತೆಗಳನ್ನು ಸ್ಥಗಿತಗೊಳಿಸಿದ್ದು, ಪಕ್ಷದ ಸುಮಾರು 300 ಕೋಟಿ ರೂ ಗಳನ್ನು ಬಳಸದಂತಾಗಿದ್ದು, ಇಂತಹ ಪರಿಸ್ಥಿತಿಯಲ್ಲಿ ಚುನಾವಣೆ ಎದುರಿಸಲು ಹೇಗೆ ಸಾಧ್ಯ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. 

    ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ‘ಕಾಂಗ್ರೆಸ್ ಪಕ್ಷದ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ. ಪಕ್ಷದ ಬ್ಯಾಂಕ್ ಖಾತೆ ಸ್ಥಗಿತಗೊಳಿಸಲು ಬಿಜೆಪಿ ಆದಾಯ ಇಲಾಖೆಗೆ ಸೂಚನೆ ನೀಡಿ ಈ ಕೆಲಸ ಮಾಡಿಸಿದೆ. ನಮ್ಮ ಸುಮಾರು 300 ಕೋಟಿ ರೂ ಗಳು ಇರುವ ಬ್ಯಾಂಕ್ ಖಾತೆಗಳು ಸ್ಥಗಿತವಾಗಿವೆ.

    ಆದರೆ ಬಿಜೆಪಿಯ ಬ್ಯಾಂಕ್ ಖಾತೆಗಳು ಮಾತ್ರ ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ. ಲೆವೆಲ್ ಪ್ಲೇಯಿಂಗ್ ಗ್ರೌಂಡ್ ಎಲ್ಲಿದೆ? ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ನಾನು ಒತ್ತಾಯಿಸುತ್ತೇನೆ. ಸತ್ಯ ಹೊರಬರದ ಹೊರತು ಅವರ ಖಾತೆಗಳನ್ನು ಸಹ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು. 

   ಸುಪ್ರೀಂ ಕೋರ್ಟ್  ಆದೇಶದಂತೆ ಭಾರತದ ಚುನಾವಣಾ ಆಯೋಗ  ಎಸ್‌ಬಿಐ ಯಿಂದ ಪಡೆದ ಚುನಾವಣಾ ಬಾಂಡ್‌ ಗಳ ಮಾಹಿತಿಯು ಭಾರತೀಯ ಜನತಾ ಪಕ್ಷದ ಮುಖವಾಡವನ್ನು ಕಳಚಿದೆ. ಬಿಜೆಪಿಯು ಇ.ಡಿ. ಮತ್ತು ಐಟಿಗಳ ಮೂಲಕ ಬೆದರಿಕೆ ಒಡ್ಡಿ ದೇಣಿಗೆ ಸಂಗ್ರಹ ಮಾಡಿರುವುದು‌ ಸ್ಪಷ್ಟವಾಗಿದೆ. ಈ ಬಗ್ಗೆ ಸಮಗ್ರ ತನಿಖೆಗೆ ಆದೇಶ ನೀಡಬೇಕು. ಇವತ್ತು ಒಂದು ಮಹತ್ವದ ವಿಷಯ ದೇಶದ ಮುಂದೆ ಬಂದಿದೆ.

   ಎಷ್ಟೇ ತೊಂದರೆ ಆದರೂ ಸರಿ ಜನರಿಗೆ ಅದರ ಹಿಂದಿನ ಸತ್ಯ ತಿಳಿಸಬೇಕು ಎಂದು ಬಂದಿದ್ದೇವೆ. ಪ್ರಧಾನಮಂತ್ರಿ ಹರಿಶ್ಚಂದ್ರನ ಹಾಗೆ ಬಹಳ ಮಾತನ್ನು ಆಡುತ್ತಿದ್ದರು. ನಾನು ತಿನ್ನಲ್ಲ, ತಿನ್ನಲು ಬಿಡುವುದಿಲ್ಲ ಎಂದು ಹೇಳುತ್ತಿದ್ದರು. ಆದರೆ, ಇವತ್ತು ಸುಪ್ರೀಂ ಕೋರ್ಟ್ ನಿಂದ ಎಲ್ಲವೂ ಬಹಿರಂಗವಾಗಿದೆ. ಬಿಜೆಪಿ ಹೇಗೆ ಹಣ ಮಾಡಿದೆ ಎಂಬುದು ಚುನಾವಣಾ ಬಾಂಡ್ ನಿಂದ ಬಯಲಾಗಿದೆ ಎಂದು ಖರ್ಗೆ ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap