ಜಾತಿ ಗಣತಿ ಯಾವಾಗ : ಹೊಸ ಸರ್ಕಾರಕ್ಕೆ ಕಾಂಗ್ರೇಸ್‌ ಪ್ರಶ್ನೆ …..!?

ನವದೆಹಲಿ:

   ‘2021ರಲ್ಲಿ ಜನಗಣತಿ ನಡೆಸದಿರುವುದರ ಪರಿಣಾಮ ಕನಿಷ್ಠ 14 ಕೋಟಿ ಭಾರತೀಯರು ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ ಅಡಿಯಲ್ಲಿ ವಿವಿಧ ಪ್ರಯೋಜನಗಳಿಂದ ವಂಚಿತರಾಗುತ್ತಿದ್ದಾರೆ’ ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್‌ ರಮೇಶ್ ಹೇಳಿದರು.

    ಜನಗಣತಿಯನ್ನು ಯಾವಾಗ ನಡೆಸಲಾಗುತ್ತದೆ ಎಂಬುವುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ತಿಳಿಸಬೇಕು ಎಂದು ಅವರು ಒತ್ತಾಯಿಸಿದರು.

    ‘2021ರಲ್ಲಿ ಪ್ರಧಾನಿ ಮೋದಿ ಅವರು ಜನಗಣತಿ ನಡೆಸಲಿಲ್ಲ. ಜನಗಣತಿ ನಡೆಸದಿರುವ ತತ್‌ಕ್ಷಣದ ಪರಿಣಾಮವೆಂದರೆ ಕನಿಷ್ಠ 14 ಕೋಟಿ ಭಾರತೀಯರು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ– 2013ರ ಅಡಿಯಲ್ಲಿ ಪ್ರಯೋಜನಗಳಿಂದ ವಂಚಿತರಾಗುತ್ತಿದ್ದಾರೆ. ಅದನ್ನು ಇದೀಗ ‘ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ’ ಎಂದು ಮರುನಾಮಕರಣ ಮಾಡಲಾಗಿದೆ’ ಎಂದು ಹೇಳಿದರು.

    ‘ಹೊಸ ಜನಗಣತಿಯು ಇತರೆ ಹಿಂದುಳಿದ ವರ್ಗಗಳು(ಒಬಿಸಿ) ಎಂದು ವರ್ಗೀಕರಿಸಲಾದ ಸಮುದಾಯಗಳ ಜನಸಂಖ್ಯೆಯ ದತ್ತಾಂಶವನ್ನು ಒದಗಿಸಬೇಕು. ಇದು ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಸಾಮಾಜಿಕ ನ್ಯಾಯಕ್ಕೆ ನಿಜವಾದ ಅರ್ಥವನ್ನು ನೀಡುತ್ತದೆ’ ಎಂದು ತಿಳಿಸಿದರು.

    10 ವರ್ಷಗಳಿಗೊಮ್ಮೆ ಕೇಂದ್ರ ಸರ್ಕಾರ ನಡೆಸುವ ಸಮಗ್ರ ಜನಗಣತಿಯು ದೇಶದ ಸಾಮಾಜಿಕ– ಆರ್ಥಿಕ ಅಭಿವೃದ್ದಿಗೆ ಅಗತ್ಯವಾಗಿದೆ ಎಂದರು.

   ಕಾಂಗ್ರೆಸ್ ತನ್ನ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ರಾಷ್ಟ್ರವ್ಯಾಪಿ ಜಾತಿ ಸಮೀಕ್ಷೆ ನಡೆಸುವುದಾಗಿ ಭರವಸೆ ನೀಡಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap