ಬೆಂಗಳೂರು
ಬಿಜೆಪಿ ಸರ್ಕಾರದಲ್ಲಿ ನಡೆದಿರುವ ಮತ್ತು ಬೆಳಕಿಗೆ ಬರುತ್ತಿರುವ ಭ್ರಷ್ಟಾಚಾರ ಪ್ರಕರಣಗಳನ್ನು ವಿರೋಧಿಸಿ ಕಾಂಗ್ರೆಸ್ ಗುರುವಾರ ಕರೆಕೊಟ್ಟಿದ್ದ ಬಂದ್ ಹಿಂಪಡೆಯಲು ಕಾಂಗ್ರೆಸ್ ನಿರ್ಧಾರಿಸಿದೆ.
ಇದನ್ನೂ ಓದಿ:
ಇನ್ನು ಇದಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ ಸೇರಿದಂತೆ ರಾಜ್ಯಾದ್ಯಂತ ಶಾಲಾ- ಕಾಲೇಜುಗಳ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಂದ್ ನ ಹಿಂಪಡೆಯಲು ನಿರ್ಧಾರಿಸಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಒತ್ತಡದ ಮೇರೆಗೆ ನಾಳೆ ನಡೆಸಬೇಕಿದ್ದ ಸಾಂಕೇತಿಕ ಕರ್ನಾಟಕ ಬಂದ್ ಅನ್ನು ವಾಪಸ್ ತೆಗೆದುಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
![](https://prajapragathi.com/wp-content/uploads/2023/03/Untitled-7-3.jpg)