ಬೆಂಗಳೂರು:
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ಇಂದು ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು.
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಸೆಪ್ಟಂಬರ್ 20 ರಂದು ಹಾಸನದ ಸಮಾರಂಭದಲ್ಲಿ ಭಾಗವಹಿಸಿ, ಮಾತನಾಡುತ್ತಿದ್ದ ಅವರ ಹೇಳಿಕೆ ರಾಜ್ಯದ ಜನತೆಯನ್ನು ಪ್ರಚೋದಿಸುತ್ತಿದ್ದರ ಹಿನ್ನೆಲೆಯಲ್ಲಿ ಈ ಪ್ರತಿಭಟನೆಯನ್ನು ಬಿಜೆಪಿ ಹಮ್ಮಿಕೊಂಡಿದೆ.
ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸಿದಲ್ಲಿ ಬಿಜೆಪಿ ವಿರುದ್ದ ದಂಗೆ ಏಳಲು ಜನರಿಗೆ ಕರೆ ನೀಡಬೇಕಾಗುತ್ತದೆ ಎಂಬ ಮುಖ್ಯಮಂತ್ರಿಯವರ ಹೇಳಿಕೆಯ ವಿರುದ್ಧ ರಾಜ್ಯ ಬಿಜೆಪಿ ನಾಯಕ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ನೇತೃತ್ವದಲ್ಲಿ ಬೆಂಗಳೂರಿನ ಮೈಸೂರು ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯದ ಸುರಕ್ಷತೆ ಹೊತ್ತ ಮುಖ್ಯಮಂತ್ರಿಗಳ ಹೇಳಿಕೆಯನ್ನು ಖಂಡಿಸಿರುವ ಸಂಸದೆ ಶೋಭಾ ಕಾರಂದ್ಲಾಜೆ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿರುವುದು ಸರಿಯಲ್ಲ ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ಸಂಸದೆ ಶೋಭಾಕಾರಂದ್ಲಾಜೆ ನಿಯೋಗದಿಂದ ಡಿ.ಜಿ.ಪಿ. ನೀಲಮಣಿ ರಾಜು ಅವರನ್ನು ಭೇಟಿ ಮಾಡಿತು. ಅಲ್ಲದೆ, ಡಿ.ಜಿ. ಮತ್ತು ಐ.ಜಿ.ಪಿ. ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಮತ್ತು ಮುಖ್ಯಮಂತ್ರಿ ವಿರುದ್ದ ಮನವಿ ಸಲ್ಲಿಸಿತು. ಇನ್ನು ಪ್ರತಿಭಟನೆಯಲ್ಲಿ ಮಾಜಿ ಶಾಸಕ ಮುನಿರಾಜು, ಬಿಜೆಪಿ ಕಾರ್ಯದರ್ಶಿ ಜಯದೇವ, ಬೆಂಗಳೂರು ಬಿಜೆಪಿ ಅಧ್ಯಕ್ಷ ಸದಾಶಿವ ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ