ಹಾನಗಲ್ :
ತಾಲೂಕಿನ ಹುಲಗಿನಹಳ್ಳಿ,ಇನಾಂನೀರಲಗಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಭರ್ಜರಿ ಪ್ರಚಾರ ಕೈಗೊಂಡರು.
ಪ್ರಚಾರ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಹಾನಗಲ್ ತಾಲ್ಲೂಕಿನ ಸರ್ವಾಂಗೀಣ ಅಭಿವೃದ್ಧಿಯೇ ನಮ್ಮಮೊದಲ ಆದ್ಯತೆಯಾಗಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಅಗತ್ಯ ವಸ್ತುಗಳ ಮೆಲೆ ಬೆಲೆ ಏರಿಕೆ ಮಾಡಿ ಜನಸಾಮಾನ್ಯರನ್ನು ಸಂಕಷ್ಟಕ್ಕೆ ತಳ್ಳುತ್ತಿವೆ ಎಂದು ಆರೋಪಿಸಿದರು.
ಕಾಂಗ್ರೆಸ್ ಪಕ್ಷದ ಗುರುತಾದ ಹಸ್ತದ ಗುರುತಿಗೆ ನೀವು ಮತ ನೀಡುವ ಮೂಲಕ ನನ್ನ ಗೆಲುವಿಗೆ ಶ್ರಮಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ, ಸಿದ್ದನಗೌಡ ಪಾಟೀಲ,ಮಾರುತಿ ಪುರ್ಲಿ,ದಾನಪ್ಪ ಗಂಟೇರ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು.ಕಾರ್ಯಕರ್ತರು ಹಾಗೂ ವ ಗ್ರಾಮಸ್ಥರು ಭಾಗಿಯಾಗಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ