ಬೆಂಗಳೂರು
ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕೈ ಅಭ್ಯರ್ಥಿಗಳು ಜಯಭೇರಿ ಭಾರಿಸಿದ್ದಾರೆ .ಚುನಾವಣೆಯಲ್ಲಿ ರಾಮೋಜಿಗೌಡ 11,841 ಮೊದಲ ಪ್ರಾಶಸ್ತ್ಯ ಮತಗಳನ್ನು ಪಡೆದು, ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಡಿ.ಟಿ ಶ್ರೀನಿವಾಸ್ 11,700ಕ್ಕೂ ಅಧಿಕ ಪ್ರಾಶಸ್ತ್ಯ ಮತಗಳನ್ನು ಪಡೆದು ಗೆಲುವು ತಮ್ಮದಾಗಿಸಿಕೊಂಡಿದ್ದಾರೆ. ಅಭ್ಯರ್ಥಿಗಳ ಗೆಲುವನ್ನು ಕಾರ್ಯಕರ್ತರು ಪಟಾಕಿ ಸಿಡಿಸುವ ಮೂಲಕ ಸಂಭ್ರಮಿಸಿದ್ದಾರೆ.
ಇನ್ನೂ ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಧನಂಜಯ್ ಸರ್ಜಿಗೆ ಭರ್ಜರಿ ಗೆಲುವಾಗಿದೆ. 37,627 ಮತಗಳನ್ನು ಪಡೆದುಕೊಂಡಿರುವ ಸರ್ಜಿ 6,935 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಇನ್ನೂ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಘುಪತಿ ಭಟ್ 7,039 ಮತಗಳನ್ನ ಪಡೆದುಕೊಂಡರೇ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ 13,516 ಮತಗಳನ್ನ ಪಡೆದು ಸೋಲು ಕಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ