ಲಖನೌ:
ಮುಂಬರುವ ನಗರ ಪಾಲಿಕೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯೊಬ್ಬರು, ಇತ್ತೀಚಿಗೆ ಪ್ರಯಾಗ್‌ರಾಜ್‌ನಲ್ಲಿ ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಗ್ಯಾಂಗ್ ಸ್ಟರ್ ಅತೀಕ್ ಅಹ್ಮದ್‌ಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ ನೀಡಬೇಕೆಂದು ಒತ್ತಾಯಿಸಿದ್ದಾರೆ. ಇದರಿಂದ ತೀವ್ರ ಮುಜುಗರಕ್ಕೆ ಒಳಗಾದ ಕಾಂಗ್ರೆಸ್, ತನ್ನ ಕೌನ್ಸಿಲರ್ ಅಭ್ಯರ್ಥಿ ರಾಜ್‌ಕುಮಾರ್ ಸಿಂಗ್ ಅಲಿಯಾಸ್ ರಜ್ಜು ಭಯ್ಯಾನನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿದೆ.
ಆಜಾದ್ ಸ್ಕ್ವೇರ್ ವಾರ್ಡ್ ಸಂಖ್ಯೆ 43ರ ಕಾಂಗ್ರೆಸ್ ಅಭ್ಯರ್ಥಿ ರಾಜ್‌ಕುಮಾರ್, ಅತೀಕ್ ರನ್ನು “ಹುತಾತ್ಮ” ಎಂದು ಬಣ್ಣಿಸಿದ್ದರು. ಅಲ್ಲದೆ ಅವರ ಅಂತಿಮ ವಿಧಿಗಳನ್ನು ಮಾಡುವಾಗ ಅವರ ದೇಹವನ್ನು ತ್ರಿವರ್ಣ ಧ್ವಜದಲ್ಲಿ ಸುತ್ತಿಡಬೇಕಿತ್ತು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಈ ವಿವಾದಾತ್ಮಕ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸರು ರಾಜಕುಮಾರ್ ಅವರನ್ನು ಬಂಧಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ