“ಬೆಲೆಯೇರಿಕೆ ಮುಕ್ತ ಭಾರತ”ಕ್ಕೆ ಕಾಂಗ್ರೆಸ್ ಆಗ್ರಹ

ಬೆಂಗಳೂರು:

ಪೆಟ್ರೋಲ್, ಡಿಸೇಲ್, ಎಲ್ಪಿಜಿ, ಸಿನ್ ಜಿ ಮತ್ತು ಪಿಎನ್ ಜಿ ಮತ್ತಿತರ ಅಗತ್ಯ ವಸ್ತುಗಳ ಬೆಲೆ ಹೆಚ್ಚಳದ ವಿರುದ್ಧ ಎಐಸಿಸಿ ದೇಶಾದ್ಯಂತ ಹಮ್ಮಿಕೊಂಡಿರುವ “ಬೆಲೆಯೇರಿಕೆ ಮುಕ್ತ ಭಾರತ ಅಭಿಯಾನ”ದ ಭಾಗವಾಗಿ ಕೆಪಿಸಿಸಿ ಬೆಂಗಳೂರಿನ ಕೆಪಿಸಿಸಿ ಕಚೇರಿ ಎದಿರು ಗುರುವಾರ ಪ್ರತಿಭಟನೆ ನಡೆಸಿತು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಬಿ. ಕೇ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಧ್ಯಕ್ಷರಾದ ಸಲೀಂ ಅಹ್ಮದ್, ರಾಮಲಿಂಗಾರೆಡ್ಡಿ, ಧ್ರುವನಾರಾಯಣ ಮತ್ತಿತರ ಮುಖಂಡರು ಭಾಗವಹಿದ್ದರು.

ಹಂಸಲೇಖ ಸಾರಥ್ಯದಲ್ಲಿ ಸಿದ್ಧವಾಗ್ತಿದೆ ಸಿದ್ದಗಂಗಾ ಶ್ರೀಗಳ ಮಿನಿ ಸಿನಿಮಾ..! ಶ್ರೀಗಳ ಪಾತ್ರದಲ್ಲಿ ಬಿಗ್ ಬಿ ಅಮಿತಾಭ್ ಬಚ್ಚನ್

ದ್ವಿಚಕ್ರ ವಾಹನ ಹಾಗೂ ಅಡುಗೆ ಅನಿಲ ಸಿಲಿಂಡರ್ ಗೆ ಹೂವಿನ ಹಾರ ಹಾಕಿ ಪೂಜೆ ಮಾಡಿ ಪ್ರತಿಭಟನೆ ನಡೆಸಿದರು.ಇದಕ್ಕೂ ಮೊದಲು ಶಿವಕುಮಾರ್ ಅವರು ಬೆಳಗ್ಗೆ ತಮ್ಮ ಸದಾಶಿವನಗರದ ನಿವಾಸದ ಬಳಿ ಅಡುಗೆ ಅನಿಲದ ಸಿಲಿಂಡರ್ ಗೆ ಹೂಹಾರ ಹಾಕಿ, ಚಪ್ಪಾಳೆ ತಟ್ಟುವ ಮೂಲಕ ಪ್ರತಿಭಟನೆ ಮಾಡಿದರು. ನಂತರ ಕೆಪಿಸಿಸಿ ಕಚೇರಿಯಲ್ಲಿ ದ್ವಿಚಕ್ರ ವಾಹನ ಹಾಗೂ ಅಡುಗೆ ಸಿಲಿಂಡರ್ ಗೆ ಗಂಟೆ ಬಾರಿಸಿ ಪೂಜೆ ಮಾಡಿದರು.ಈ ಸಂದರ್ಭದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಹೇಳಿದ್ದಿಷ್ಟು:

‘ಇಂದು ಮಾರ್ಚ್ 31 ಆರ್ಥಿಕ ವರ್ಷ ಮುಕ್ತಾಯದ ದಿನ. ಹೀಗಾಗಿ ಇಂದು ಪ್ರತಿಭಟನೆ ಮಾಡಲು ನಿರ್ಧರಿಸಿದ್ದೇವೆ. ಕಳೆದ 11 ದಿನಗಳಲ್ಲಿ ಕೇಂದ್ರ ಸರ್ಕಾರ 10 ಬಾರಿ ಇಂಧನ ಬೆಲೆ ಏರಿಕೆ ಮಾಡಿದೆ. ದಿನನಿತ್ಯ ಜನರ ಜೇಬು ಪಿಕ್ ಪಾಕೇಟ್ ಆಗುತ್ತಿದೆ.

ಎಲ್ಲರ ಆದಾಯ ಡಬಲ್ ಮಾಡುತ್ತೇವೆ ಎಂದಿದ್ದ ಬಿಜೆಪಿ ಸರ್ಕಾರ, ಬೆಲೆ ಏರಿಕೆ ಗಗನಕ್ಕೇರಿದೆ. ಆದಾಯ ಪಾತಳಕ್ಕೆ ಹೋಗಿದೆ. ಹೀಗಾಗಿ ನಾವು ಈ ಪ್ರತಿಭಟನೆ ಮಾಡುತ್ತಿದ್ದೇವೆ. ವಾಹನ ಸವಾರರಿಂದ ಹಿಡಿದು, ಗೃಹಿಣಿಯವರೆಗೂ ಎಲ್ಲರೂ ದಿನನಿತ್ಯ ನೋವು ಅನುಭಿಸುತ್ತಿದ್ದಾರೆ. ಈಗಾಗಲೇ ಸುಮಾರು 35 ರೂ. ಏರಿಕೆಯಾಗಿದ್ದು, ಪೆಟ್ರೋಲ್ ಬೆಲೆ 111 ರೂ. ಮುಟ್ಟಿದೆ. ಇದರ ವಿರುದ್ಧ ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷ ಹೋರಾಟ ಮಾಡುತ್ತಿದ್ದು, ನಮ್ಮ ಮನೆಗಳ ಮುಂದೆ ಅಡುಗೆ ಅನಿಲ ಸಿಲಿಂಡರ್, ವಾಹನಗಳಿಗೆ ಹೂವಿನ ಹಾರ ಹಾಕಿ ಪೂಜೆ ಮಾಡಿದ್ದೇವೆ.

IPL 2022 : ಕಡಿಮೆ ರನ್​ ಟಾರ್ಗೆಟ್​ಗೂ ತಿಣುಕಾಡಿ ಗೆದ್ದ ಆರ್​ಸಿಬಿ

ಕಾಂಗ್ರೆಸ್ ಕಚೇರಿ ಮುಂದೆ ನಾನು, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು, ನಮ್ಮ ಕಾರ್ಯಾಧ್ಯಕ್ಷರುಗಳು, ಎಐಸಿಸಿ ನಾಯಕರು ಪ್ರತಿಭಟನೆ ಮಾಡುತ್ತಿದ್ದೇವೆ. ರಾಜ್ಯದ ಜನ ದಡ್ಡರಲ್ಲ. ಅವರು ಅವಕಾಶಕ್ಕಾಗಿ ಕಾದು ಕುಳಿತಿದ್ದಾರೆ. ಅವಕಾಶ ಸಿಕ್ಕಾಗ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವ ಮೂಲಕ ಅವರ ದಿನನಿತ್ಯದ ನೋವನ್ನು ಹೊರಹಾಕಲಿದ್ದಾರೆ ಎಂಬ ನಂಬಿಕೆ ಇದೆ. ನಾವು ಜನರ ಧ್ವನಿಯಾಗಿ ಕೆಲಸ ಮಾಡುತ್ತಿದ್ದೇವೆ.’

ಪಂಚರಾಜ್ಯ ಚುನಾವಣೆ ನಡೆಯುವಾಗ ತಡೆಯಲಾಗಿದ್ದ ಬೆಲೆ ಏರಿಕೆ, ಫಲಿತಾಂಶ ಬಂದ ನಂತರ ಮತ್ತೆ ಆರಂಭವಾಗಿದೆಯೇ ಎಂಬ ಪ್ರಶ್ನೆಗೆ, ‘ಅವರು ತಡೆ ಹಿಡಿದಿದ್ದರೋ ಇಲ್ಲವೋ, ಜನರಿಗಂತೂ ಪ್ರಾಣ ಹಿಂಡುತ್ತಿದ್ದಾರೆ. ನಮ್ಮ ಹಳ್ಳಿಕಡೆ ಒಂದು ಮಾತಿದೆ. 100 ಚಪ್ಪಲಿ ಏಟು ತಿನ್ನಬಹುದು, ಆದರೆ ದುಡ್ಡಿನ ಏಟು ಮಾತ್ರ ತಡೆಯಲು ಆಗುವುದಿಲ್ಲ. ಅದೇ ರೀತಿ ಈ ಸರ್ಕಾರ ದಿನನಿತ್ಯ ಜನರ ಬದುಕಿನಲ್ಲಿ ಚೆಲ್ಲಾಟವಾಡುತ್ತಿದೆ’ ಎಂದು ಉತ್ತರಿಸಿದರು.

ಹಲಾಲ್ ಕಟ್ ಮಾಂಸ ಬಳಕೆಗೆ ತೀವ್ರ ಆಕ್ಷೇಪ: ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ- ಸಿಎಂ ಬಸವರಾಜ ಬೊಮ್ಮಾಯಿ

ಜನರ ಸಮಸ್ಯೆಗಳ ಬದಲು ಭಾವನಾತ್ಮಕ ವಿಚಾರ ಚುನಾವಣೆ ಅಜೆಂಡಾ ಆಗುತ್ತಿದೆಯೇ ಎಂಬ ಪ್ರಶ್ನೆಗೆ, ‘ಅವರು ಸಮಾಜ ಒಡೆಯುವವರಾದರೆ, ನಾವು ಸಮಾಜವನ್ನು ಒಂದು ಮಾಡುತ್ತೇವೆ. ಇದೇ ನಮಗೂ ಅವರಿಗೂ ಇರುವ ವ್ಯತ್ಯಾಸ’ ಎಂದು ಉತ್ತರಿಸಿದರು.

       ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap