ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಹೋರಾಟ; ಸಿಎಂ

ಬೆಂಗಳೂರು:

ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್‌ನವರು ಹೋರಾಟ ನಡೆಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೂರಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಹೋರಾಟಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು.

ತಮ್ಮ ಕಾಲದಲ್ಲಿ ಹಲವಾರು ಬಲಿಯಾಗಿ, ಆ ಕೊಲೆಗಳನ್ನು ಮಾಡಿದ ಆರ್ಗನೈಸೇಷನ್‌ನ ಕೇಸ್ ಹಿಂಪಡೆದು, ರಾಜ್ಯದಲ್ಲಿ ಆರಾಜಕತೆ ಸೃಷ್ಟಿಯಿಸಿದ ಕಾಂಗ್ರೆಸ್‌ಅನ್ನು ಜನತೆ ಇಂದು ತಿರಸ್ಕರಿಸಿದ್ದಾರೆ. ಹಾಗಾಗಿ, ಕಾಂಗ್ರೆಸ್ಸಿಗರಿಗೆ ಹೋರಾಟ ಮಾಡುವ ಯಾವುದೆ ನೈತಿಕ ಹಕ್ಕಿಲ್ಲ. ರಾಜಕೀಯ ಲಾಭಕ್ಕಾಗಿ ಹೋರಾಟಕ್ಕಿಳಿದಿದ್ದಾರೆ ಎಂದರು.

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಕುರಿತು ಸಂಪೂರ್ಣ ತನಿಖೆ ಆಗಲಿದೆ. ಸತ್ಯ ಹೊರಬರಲಿದೆ. ಆಧಾರರಹಿತ ಆರೋಪಗಳಿಗೆ ನಾವು ಪ್ರತಿಕ್ರಿಯೆ ನೀಡುವ ಅವಶ್ಯಕತೆ ಇಲ್ಲ. ಆಧಾರ ಇದ್ದರೆ ನೀಡಿದರೆ ತನಿಖೆ ಮಾಡಿಸುತ್ತೇವೆ. ಪ್ರಾಥಮಿಕ ತನಿಖೆ ಈಗ ಆಗಲಿದೆ. ಅದರ ಆಧಾರದ ಮೇಲೆ ತನಿಖೆ ಕುರಿತು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. 

ಸಿಎಂ ಕಚೇರಿಯಲ್ಲಿ ಲಂಚ ಪಡೆಯಲಾಗುತ್ತಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಹಲವಾರು ಪ್ರಕರಣ, ಲಂಚ ಆರೋಪಗಳು ಬಂದಿವೆ. ಬಿಡಿಎನಲ್ಲಿ ದೊಡ್ಡ ಹಗರಣವಾಗಿದೆ. ಹೀಗಿರುವಾಗ ಅವರಿಗೆ ಮಾತನಾಡುವ ಯಾವ ಹಕ್ಕಿದೆ ಎಂದು ಪ್ರಶ್ನಿಸಿದರು. ಜವಾಬ್ಧಾರಿ ಸ್ಥಾನದಲ್ಲಿರುವ ಅವರು, ನಿಗದಿತ ಪ್ರಕರಣ ತಿಳಿಸಿದರೆ, ತನಿಖೆ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ