ಬೆಂಗಳೂರು
ರಾಜ್ಯಸಭೆ ಚುನಾವಣೆಗೆ ನಾಮಮತ್ರ ಸಲ್ಲಿಕೆ ಮಾಡಲು ಗುರುವಾರ ಕೊನೆಯ ದಿನವಾಗಿದೆ. ಕರ್ನಾಟಕದಲ್ಲಿ ವಿಧಾನಸಭೆಯಿಂದ ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ನಡೆಯುವ ಚುನಾವಣೆ ಕುತೂಹಲ ಮೂಡಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಹೊಂದಿದ್ದರೂ ಸಹ ಈಗ ಅಡ್ಡ ಮತದಾನದ ಆತಂಕ ಎದುರಾಗಿದೆ.
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಚುನಾವಣೆಗೆ 5ನೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಹೊಸ ದಾಳ ಪ್ರಯೋಗ ಮಾಡಿದೆ. ಫೆಬ್ರವರಿ 27ರಂದು ರಾಜ್ಯಸಭೆ ಚುನಾವಣೆ ನಡೆಯಲಿದ್ದು, ಈಗ ಶಾಸಕರು ಅಡ್ಡ ಮತದಾನ ಮಾಡಲಿದ್ದಾರೆಯೇ? ಎಂಬುದು ಪ್ರಶ್ನೆ.
ಕಾಂಗ್ರೆಸ್‌ಗೆ ತಿರುಗೇಟು ನೀಡಲು ಕೊನೆಯ ಕ್ಷಣದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ 5ನೇ ಅಭ್ಯರ್ಥಿಯಾಗಿ ರಾಜ್ಯಸಭೆಯ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಎನ್‌ಡಿಎ ಮೈತ್ರಿಕೂಟದ ಈ ತಂತ್ರ ರಾಜಕೀಯ ಲೆಕ್ಕಾಚಾರವನ್ನು ಬದಲಾವಣೆ ಮಾಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ