17 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಿದ್ದವಾಯ್ತು ಕಾಂಗ್ರೆಸ್…!

ಬೆಂಗಳೂರು:

      ದೆಹಲಿಯಲ್ಲಿ ಸಭೆ ಸೇರಿದ್ದ ಕಾಂಗ್ರೆಸ್ ಚುನಾವಣಾ ಸಮಿತಿಯು ಬಾಕಿಯಿದ್ದ 21 ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಅಂತಿಮಗೊಳಿಸುವಲ್ಲಿ ಯಶಸ್ವಿಯಾಗಿದ್ದು, ಪಟ್ಟಿಯನ್ನು ಬುಧವಾರ ಪ್ರಕಟಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

    ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 21 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಯಿತು. ಆದರೆ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬಳ್ಳಾರಿ ಈ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡಿಲ್ಲ ಎಂದು ತಿಳಿದುಬಂದಿದೆ.

    ಎಐಸಿಸಿ ನಾಯಕಿ ಸೋನಿಯಾ ಗಾಂಧಿ, ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದ ಸಿಇಸಿ ಸಭೆಯಲ್ಲಿ ಒಟ್ಟು 17 ಕ್ಷೇತ್ರಗಳ ಟಿಕೆಟ್‌ ಅಂತಿಮಗೊಳಿಸಲಾಗಿದೆ. ಇನ್ನು ರಾಜ್ಯದ 7 ಕ್ಷೇತ್ರಗಳಿಗೆ ಕಾಂಗ್ರೆಸ್‌ ಮೊದಲ ಪಟ್ಟಿಯಲ್ಲಿ ಈಗಾಗಲೇ ಟಿಕೆಟ್‌ ಘೋಷಣೆಯಾಗಿದೆ.

     ಪಟ್ಟಿಯಲ್ಲಿ ಐವರು ಸಚಿವರ ಮಕ್ಕಳಿಗೆ ಟಿಕೆಟ್ ನೀಡಲಾಗಿದೆ ಎಂದು ತಿಳಿದುಬಂದಿದೆ. ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳಕ್ಕರ್‌ ಪುತ್ರ ಮೃಣಾಲ್‌ಗೆ ಹಾಗೂ ಚಿಕ್ಕೋಡಿಯಿಂದ ಸತೀಶ್‌ ಜಾರಕಿಹೊಳಿ ಪುತ್ರಿ ಪ್ರಿಯಾಂಕಾಗೆ ಅವಕಾಶ ನೀಡಲಾಗಿದ್ದು, ಸಚಿವ ಶಿವಾನಂದ ಪಾಟೀಲ್‌ ಪುತ್ರಿ ಸಂಯುಕ್ತ ಪಾಟೀಲ್‌ಗೆ ಬಾಗಲಕೋಟೆಯಿಂದ ಟಿಕೆಟ್‌ ನೀಡಲಾಗಿದೆ. ಶಾಮನೂರು ಶಿವಶಂಕರಪ್ಪ ಸೊಸೆ ಪ್ರಭಾ ಮಲ್ಲಿಕಾರ್ಜುನಗೆ ದಾವಣಗೆರೆಯಿಂದ ಹಾಗೂ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿಗೆ ಬೆಂಗಳೂರು ದಕ್ಷಿಣದಿಂದ ಟಿಕೆಟ್‌ ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಿಇಸಿ ಅಂತಿಮಗೊಳಿಸಿರುವ ಅಭ್ಯರ್ಥಿಗಳ ವಿವರ

 • ಚಿತ್ರದುರ್ಗ -ಬಿ.ಎನ್‌.ಚಂದ್ರಪ್ಪ
 • ಬೆಳಗಾವಿ – ಮೃಣಾಲ್‌ ಹೆಬ್ಬಾಳಕರ್‌
 • ಚಿಕ್ಕೋಡಿ – ಪ್ರಿಯಾಂಕಾ ಜಾರಕಿಹೊಳಿ
 • ಬಾಗಲಕೋಟೆ – ಸಂಯುಕ್ತಾ ಪಾಟೀಲ್‌
 • ಧಾರವಾಡ – ವಿನೋದ್‌ ಅಸುಟಿ
 • ದಾವಣಗೆರೆ – ಪ್ರಭಾ ಮಲ್ಲಿಕಾರ್ಜುನ
 • ಕೊಪ್ಪಳ – ರಾಜಶೇಖರ ಹಿಟ್ನಾಳ್‌
 • ಕಲಬುರಗಿ – ರಾಧಾಕೃಷ್ಣ ದೊಡ್ಡಮನಿ
 • ಬೀದರ್‌ – ರಾಜಶೇಖರ್‌ ಪಾಟೀಲ್‌
 • ದಕ್ಷಿಣ ಕನ್ನಡ – ಪದ್ಮರಾಜ್‌
 • ಉಡುಪಿ -ಚಿಕ್ಕಮಗಳೂರು -ಜಯಪ್ರಕಾಶ್‌ ಹೆಗ್ಡೆ
 • ಬೆಂಗಳೂರು ದಕ್ಷಿಣ – ಸೌಮ್ಯ ರೆಡ್ಡಿ
 • ಬೆಂಗಳೂರು ಸೆಂಟ್ರಲ್‌ -ಮನ್ಸೂರ್‌ ಅಲಿಖಾನ್‌
 • ಬೆಂಗಳೂರು ಉತ್ತರ -ಪ್ರೊ.ರಾಜೀವ್‌ ಗೌಡ
 • ಮೈಸೂರು -ಎಂ.ಲಕ್ಷ್ಮಣ್‌
 • ರಾಯಚೂರು -ಜಿ.ಕುಮಾರ ನಾಯಕ್‌
 • ಉತ್ತರ ಕನ್ನಡ -ಡಾ.ಅಂಜಲಿ ನಿಂಬಾಳ್ಕರ್‌

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap