ಕುಮಾರಸ್ವಾಮಿಗೆ ಖಡಕ್‌ ರಿಪ್ಲೈ ಮಾಡಿದ ಕಾಂಗ್ರೆಸ್….!

ಬೆಂಗಳೂರು:

     ವೆಸ್ಟ್​ ಎಂಡ್​​ ಹೋಟೆಲ್​ನಲ್ಲಿ 1 ದಿನದ ಬಾಡಿಗೆ ಎಷ್ಟು ಕುಮಾರಸ್ವಾಮಿಯವರೇ? ಅಲ್ಲಿ ಖಾಯಂ ಅಡ್ಡ ತೆರೆದಿದ್ದೀರಿ ಅದಕ್ಕೆ ಎಷ್ಟು ಕೋಟಿ ಸುರಿದಿದ್ದೀರಿ? ಹೋಟೆಲ್​ಗೆ ಜಮೀನಿನಲ್ಲಿ ಉಳುಮೆ ಮಾಡಿ ಬಾಡಿಗೆ ಕಟ್ಟುತ್ತಿದ್ದೀರಾ? ಅಥವಾ ‘ಕೆಎಸ್​ಟಿ’ ಸಂಗ್ರಹದ ಹಣ ಬಳಸುತ್ತಿದ್ದೀರಾ? ‘KST ಕುಮಾರ್’ ಅವರು ಉತ್ತರಿಸಬೇಕು ಎಂದು ಕಾಂಗ್ರೆಸ್ ಟ್ವೀಟ್​ ಪರೋಕ್ಷವಾಗಿ ಕುಮಾರಸ್ವಾಮಿ ಸರ್ವಿಸ್ ಟ್ಯಾಕ್ಸ್ ಎಂದು ತಿರುಗೇಟು ನೀಡಿದೆ.

     ಇನ್ನು ಕಾಂಗ್ರೆಸ್​ ಕೆಎಸ್​ಟಿ ಟ್ವೀಟ್​ಗೆ ಜೆಡಿಎಸ್​ ಸಹ ಸರಣಿ ಟ್ವೀಟ್​ ಮಾಡಿದ್ದು, ವೆಸ್ಟ್‌ ಎಂಡ್‌ ಲೆಕ್ಕ ಇರಲಿ, ‘ ಸಿಎಂ ಟಿಪ್ಪಣಿ ಬಿಕರಿ’ಗೆ ಲೆಕ್ಕ ಇಡಿ. ಒಂದು ಎಸಿ ಹುದ್ದೆ, 3 ಟಿಪ್ಪಣಿ. ಇದ್ಯಾವ ಸೀಮೆ ಅರ್ಥಶಾಸ್ತ್ರ? ಕೌಟಿಲ್ಯನೂ ಬೆಚ್ಚಿಬೀಳುವ ಆಡಳಿತ ಹಾಗೂ ರಾಜನೀತಿ. ಈ ಟಿಪ್ಪಣಿಗಳ ಹಣ ಪಕ್ಷದ ಮಂಡಿಗೋ ಅಥವಾ #YstTax ಹುಂಡಿಗೋ? ಇಲ್ಲೇ ಸಾಕ್ಷ್ಯ ಇದೆ. ಪಾಪ.. ಬೂಟಾಟಿಕೆ ದಾಸಯ್ಯನಿಗೆ ಮೈಯ್ಯೆಲ್ಲಾ ಪಂಗನಾಮ ಎಂದು ಟಾಂಗ್ ಕೊಟ್ಟಿದೆ.

    ವೆಸ್ಟ್‌ʼಎಂಡ್‌ ಬಾಡಿಗೆ ಮಾತಿರಲಿ; ಲುಲು ಮಾಲು ವಿಷಯಕ್ಕೆ ಬರೋಣ. ಹೊಲ ಉತ್ತಿ, ಬೀಜ ಬಿತ್ತಿ ಬೆವರಿನ ಹೊಳೆ ಹರಿಸಿ ತೆಗೆದ ಫಸಲಿಗೆ ಲುಲು ಮಾಡಬಹುದಾ? ಒಂದು ವೇಳೆ ಮಾಡಬಹುದಾದರೆ, ನಿಮ್ಮ ‘ಲುಲುಕುಮಾರ್ʼಗಿಂತ ಬೆಸ್ಟ್‌ ಎಕನಾಮಿಸ್ಟ್‌ ಇನ್ನೊಬ್ಬರಿಲ್ಲ! ಹಾಗಿದ್ದರೆ, ಅವರನ್ನೇ ವಿತ್ತಮಂತ್ರಿ ಮಾಡಬಹುದಿತ್ತಲ್ಲ ಎಂದು ಪರೋಕ್ಷವಾಗಿ ಡಿಕೆ ಶಿವಕುಮಾರ್ ಕಾಲೆಳೆದಿದೆ.

     ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು #YstTax ಬಗ್ಗೆ ಹೇಳಿ, ʼಕಾಸಿಗಾಗಿ ಹುದ್ದೆʼ #CashForPosting ದಂಧೆಯನ್ನು ದಾಖಲೆ ಸಮೇತ ಬಿಚ್ಚಿಟ್ಟರೂ ಆ ಅಸಹ್ಯ ತನ್ನದಲ್ಲ ಎನ್ನುವ ‘ ಅವಿವೇಕ ‘ ಕಾಂಗ್ರೆಸ್ ಪಕ್ಷದ್ದು. ಆ ಅವಿವೇಕವನ್ನು ಮುಚ್ಚಿಕೊಳ್ಳಲು ಈಗ ವೆಸ್ಟ್ʼಎಂಡ್ ಎನ್ನುವ ಸವಕಲು ವಿಷಯ ನೆನಪು ಮಾಡಿಕೊಂಡಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link