ಬೆಂಗಳೂರು
ಕಾಂಗ್ರೆಸ್ ತಮ್ಮ ನೂರು ವರ್ಷಗಳ ಸಂಸ್ಕೃತಿಯನ್ನು ಗಾಳಿಗೆ ತೂರಿದ್ದಾರೆ. ಇನ್ನೂ ಅಧಿಕಾರದ ಮದದಲ್ಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಜನರನ್ನು ಗುಲಾಮರೆಂದು ತಿಳಿದುಕೊಂಡಿದರುವ ಕಾಂಗ್ರೆಸ್, ಮತ ಬ್ಯಾಂಕ್ ಎಂದು ತಿಳಿದುಕೊಂಡು ಏನು ಬೇಕಾದರೂ ಮಾತಾಡಿದರೆ ನಡೆಯುತ್ತದೆ ಎಂಬ ಅಮಲಿನಲ್ಲಿ ಇದ್ದಾರೆ. ಜನ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾತಾಡಿರೋದು ಎಲ್ಲಕಿಂತ ಹೆಚ್ಚು ನೋವಾಗಿದೆ. ಸಿದ್ದರಾಮಯ್ಯ ಹಾಗೂ ಖರ್ಗೆ ಅವರು 50 ವರ್ಷ ಸಾರ್ವಜನಿಕ ಜೀವನ ಕಳೆದಿದ್ದಾರೆ. ಕೊನೆಯ ಹಂತದಲ್ಲಿ ಗೌರವ ಯುತವಾಗಿ ನಡೆದುಕೊಂಡರಿಗೆ ಶೋಭೆ ತರುತ್ತದೆ ಎಂದರು. ಇಲ್ಲದಿದ್ದರೆ ಜನ ಇಷ್ಟು ವರ್ಷ ಇವರು ಏನು ಮಾಡಿದರು ಎಂದು ಕೇಳುತ್ತಾರೆ ಎಂದರು.
ಮೋದಿ ಅವರನ್ನು ಯಾವಾಗ ಯಾವಾಗ ಬೈದ್ರು ಅವಾಗ ಮೋದಿ ಮತ ಜಾಸ್ತಿ ಆಗಿವೆ. ಮುಖ್ಯಮಂತ್ರಿ ಆದಾಗ ಬೈದರು,ಮೋದಿ ಮೂರು ಬಾರಿ ಮುಖ್ಯಮಂತ್ರಿ ಆದರು. ಪ್ರಧಾನಮಂತ್ರಿಯಾದರು. ಇದೀಗ ವಿಷ ಸರ್ಪ ಎಂಬ ಹೇಳಿಕೆ ಮೂಲಕ ಜನರ ಭಾವನೆ ಕೆರಳುಸತ್ತಿದ್ದಾರೆ.ಜನರೇ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ. ಸಿದ್ದರಾಮಯ್ಯ ಅವರು ನನ್ನನ್ನು ಗುರಿಯಾಗಿಸುವುದು ಸಹಜ ಎಂದರು.
ಕಾಂಗ್ರೆಸ್ ನವರ ಮತ ಬ್ಯಾಂಕ್ ಆಗಿದೆ. ಅವರ ಮತ ಬ್ಯಾಂಕ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು. ಅವರ ಕಾಲ ಕೆಳಗೆ ಇದ್ದ ಮತಗಳು ಸರಿದು ಹೋಗಿದೆ ಹಾಗಾಗಿ ನನ್ನನ್ನು ಟಾರ್ಗೆಟ್ ಮಾಡಿದ್ದಾರೆ ಎಂದರು.
ಎಸ್ಸಿ, ಎಸ್ಟಿ, ಒಬಿಸಿ ಮತಗಳು ಅವರ ಕೈ ತಪ್ಪಿ ಅವರ ಅಣೆಕಟ್ಟು ಒಡೆದಿದೆ ಎಂದ ಸಿಎಂ, ಸಿದ್ದರಾಮಯ್ಯ ಇದೀಗ ಡಿಕೆ ಶಿವಕುಮಾರ್ ಗೆ ಪೈಪೋಟಿ ಕೊಡುತ್ತಿದ್ದಾರೆ. ಆ ಮಟ್ಟಕ್ಕೆ ಸಿದ್ದರಾಮಯ್ಯ ಇಳಿದಿದ್ದಾರೆ.
ಆಂತರಿಕವಾಗಿ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಜೊತೆ ಪೈಪೋಟಿಗೆ ಇಳಿದಿದ್ದಾರೆ. ಸಿದ್ದರಾಮಯ್ಯ ಅವರ ಮೇಲೆ 8 ಸಾವಿರ ಕೋಟಿ ರೂ.ಗಳ ಭ್ರಷ್ಟಾಚಾರದ ಆರೋಪ ಇದೆ. ಅದಕ್ಕೆ ಉತ್ತರ ಕೊಡಬೇಕಾಗತ್ತೆ ಎಂದು ಹೀಗೆ ಮಾತನಾಡುತ್ತಿದ್ದಾರೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ