ಕಾಂಗ್ರೆಸ್ ಹೈಕಮಾಂಡ್​ನಿಂದ ಬಂತು ಖಡಕ್ ಸಂದೇಶ, ಸಚಿವರ ವರದಿ ಸಲ್ಲಿಸಲು ಸೂಚನೆ

ಬೆಂಗಳೂರು

    ಕರ್ನಾಟಕ ಕಾಂಗ್ರೆಸ್​​ನಲ್ಲಿ ಪಟ್ಟದ ಆಟ ಜೋರಾಗಿರುವ ಬೆನ್ನಲ್ಲೇ ಹೈಕಮಾಂಡ್ ಮಧ್ಯ ಪ್ರವೇಶ ಮಾಡಿ ಖಡಕ್ ಸಂದೇಶ ರವಾನೆ ಮಾಡಿದೆ. ಎಚ್ಚರಿಕೆ ನಡುವೆಯೂ ಬಹಿರಂಗ ಹೇಳಿಕೆ ನೀಡುತ್ತಿರುವ ಸಚಿವರ ವರದಿಯನ್ನು ಹೈಕಮಾಂಡ್ ಕೇಳಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಇದರ ಬೆನ್ನಲ್ಲೇ, ಸಚಿವ ಸತೀಶ್ ಜಾರಕಿಹೊಳಿ, ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂಬ ಸ್ಪಷ್ಟೀಕರಣ ನೀಡಿದ್ದಾರೆ.

   ಕಳೆದ ಒಂದೂವರೆ ವರ್ಷದಿಂದ ಸಚಿವರು ತಮ್ಮ ಇಲಾಖೆಯಲ್ಲಿ ಯಾವ ರೀತಿ ಕಾರ್ಯನಿರ್ವಹಣೆ ಮಾಡಿದ್ದಾರೆ? ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಪಕ್ಷದ ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಹೇಳಿದ್ದಾರೆ. ಆದರೆ ಅನೇಕ ಸಚಿವರು ಅನಗತ್ಯ ಗೊಂದಲ ಉಂಟು ಮಾಡುವ ಹೇಳಿಕೆ ನೀಡುತ್ತಿದ್ದಾರೆ. ಇಂತಹ ಹೇಳಿಕೆ ನೀಡುವವರ ಸಂಪೂರ್ಣ ವರದಿ ನೀಡಿ ಎಂದು ಹೈಕಮಾಂಡ್ ಕೇಳಿದೆ. ಪಕ್ಷದ ಶಿಸ್ತನ್ನು ಉಲ್ಲಂಘಿಸಿ ಪದೇ ಪದೆ ಮಾಧ್ಯಮಗಳಿಗೆ ಹೇಳಿಕೆ ಕೊಡುವ ಸಚಿವರ ಸಂಪೂರ್ಣ ವಿವರಗಳನ್ನು ಕೊಡುವಂತೆ ಹೈ ಕಮಾಂಡ್‌ ಸೂಚಿಸಿದೆ.
 
   ಕೆಲವು ಸಚಿವರು ಪದೇ ಪದೆ ಮಾತನಾಡುತ್ತಿದ್ದಾರೆ. ಇದು ಸರಿ ಅಲ್ಲವೇ ಅಲ್ಲ. ಸಚಿವರಾದ ತಿಮ್ಮಾಪುರ, ಸತೀಶ್ ಜಾರಕಿಹೊಳಿ ಹಾಗೂ ಹೆಚ್​ಸಿ ಮಹದೇವಪ್ಪ ಅವರು ಪದೇ ಪದೇ ಮಾತನಾಡುತ್ತಿದ್ದು, ಹೈಕಮಾಂಡ್ ಗಂಭೀರವಾಗಿ ಎಲ್ಲವನ್ನೂ ಗಮನಿಸುತ್ತಿದೆ. ಎಲ್ಲ ಸಚಿವರ ರಿಪೋರ್ಟ್ ಕಾರ್ಡ್‌ಗಳನ್ನು ಸಹ ಹೈಕಮಾಂಡ್ ಸೂಕ್ಷ್ಮವಾಗಿ ಗಮನಿಸುತ್ತಿದೆ. ಪಕ್ಷದ ನಾಯಕತ್ವದ ಬಗ್ಗೆ ಮಾತನಾಡಬಾರದು ಎಂದು ಹೈಕಮಾಂಡ್ ಸೂಚನೆ ನೀಡಿದೆ. ಪಕ್ಷದ ಆದೇಶವನ್ನು ಉಲ್ಲಂಘನೆ ಮಾಡುವವರಿಗೆ ಮುಂದಿನ ದಿನಗಳಲ್ಲಿ ಪರಿಣಾಮ ತಟ್ಟಲಿದೆ ಎಂದು ಮಾಧ್ಯಮ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

Recent Articles

spot_img

Related Stories

Share via
Copy link