ಕಾಂಗ್ರೆಸ್‌ ಡ್ಯಾಮೇಜ್‌ ಕಂಟ್ರೋಲ್‌ ಗೆ ಮುಂದಾಗಿದೆ : ಬೊಮ್ಮಾಯಿ

ಬೆಂಗಳೂರು

     ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಆರಂಭದಿಂದಲೂ ಗೋಚರಿಸುತ್ತಿದ್ದು, ಬಿ‌.ಕೆ. ಹರಿಪ್ರಸಾದ್ ಹೇಳಿಕೆಯಿಂದ ಸರ್ಕಾರಕ್ಕೆ ಆಗಿರುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಿಂಗಪುರ ಕಾರ್ಯತಂತ್ರದ ಕಥೆ ಹೇಳಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

     ಈ ಕುರಿತು ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಸರ್ಕಾರಕ್ಕೆ ಬಾಲಗೃಹ ಪೀಡೆ ಶುರುವಾಗಿದೆ. ಕಾಂಗ್ರೆಸ್ ಸರ್ಕಾರ ಮೊದಲ ದಿನದಿಂದ ಎಲ್ಲವೂ ಸರಿ ಇಲ್ಲ ಎನ್ನುವುದು ಸ್ಪಷ್ಟವಾಗುತ್ತಿದೆ. ಸ್ಪಷ್ಟ ಬಹುಮತ ಇದ್ದರೂ ಮುಖ್ಯಮಂತ್ರಿ ಆಯ್ಕೆ ಮಾಡಿರುವ ವಿಧಾನ, ಸಿಕ್ರೆಟ್ ಬ್ಯಾಲೆಟ್ ಬಳಕೆ ಮಾಡಿರುವುದು ಬಹುಮತ ಇದ್ದರೂ ಇಷ್ಟು ಸರ್ಕಸ್ ಮಾಡಿದ್ದು ಎಲ್ಲವೂ ಸರಿ ಇಲ್ಲ ಅಂತ ಆರ್ಥವಾಗುತ್ತದೆ. 

     ಸಂಸತ್‌ನಲ್ಲಿ ಪಟ್ಟು ಸಡಿಲಿಸದ ವಿಪಕ್ಷಗಳು ಸಿದ್ದರಾಮಯ್ಯ ಗ್ಯಾರೆಂಟಿಗಳಿಗೆ ಹಣ ನೀಡುವ ಸಲುವಾಗಿ ಅಭಿವೃದ್ಧಿಗೆ ಅನುದಾನ ಇಲ್ಲ ಅಂತ ಹೇಳಿದ್ದಾರೆ. ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದು ಸ್ಪಷ್ಟವಾಗಿದೆ. ಶಾಸಕರೇ ಬಹಿರಂಗವಾಗಿಯೇ ಹೇಳಿದ್ದಾರೆ. ಸಚಿವರುಗಳ ವಿರುದ್ದ ಅಸಮಾಧಾನ ಹೊರ ಹಾಕಿದ್ದಾರೆ. ಆದರೆ, ಸಿದ್ದರಾಮಯ್ಯ ಅರ್ಧ ಸತ್ಯ ಹೇಳಿದ್ದಾರೆ ಎಂದರು. 

     ನಾನು ಮುಸ್ಲಿಂ ಧರ್ಮವನ್ನು ದ್ವೇಷಿಸುತ್ತೇನೆ!? ಡ್ಯಾಮೇಜ್ ಕಂಟ್ರೊಲ್‌ಗೆ ಸಿಂಗಾಪುರ ಕಥೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಅವರ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ನೀಡಿರುವ ಹೇಳಿಕೆಯಿಂದ ಆಗಿರುವ ಡ್ಯಾಮೆಜ್ ಕಂಟ್ರೋಲ್ ಮಾಡಲು ಸಿಂಗಪುರ ತಂತ್ರದ ಬಗ್ಗೆ ಹೇಳಿದ್ದಾರೆ. ಸ್ವತಃ ಡಿ.ಕೆ ಶಿವಕುಮಾರ್ ಅವರು ಮುಂದೆ ಅವರು ತಾವು ಮಾಡುವ ಕಾರ್ಯತಂತ್ರದ ಬಗ್ಗೆ ಈಗ ಮಾತನಾಡುತ್ತಿದ್ದಾರೆ. ಇದು ಅವರಲ್ಲಿಯೆ ಸಮಾಧಾನ ಇಲ್ಲ ಎನ್ನುವುದು ತೋರಿಸಿದ್ದಾರೆ‌. ಬಿಜೆಪಿಯ ಹೈಕಮಾಂಡ್ ಈ ಸರ್ಕಾರ ಅಸ್ಥಿರಗೊಳಿಸುವ ಬಗ್ಗೆ ಆಲೋಚಿಸಿಲ್ಲ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link