ಪಂಜಾಬ್
ಗಡಿ ರಾಜ್ಯ ಪಂಜಾಬ್‌ನಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು ಕೊಲೆ ಸುಲಿಗೆ ಮುಂತಾದ ಕೃತ್ಯಗಳು ರಾಜಾರೋಷವಾಗಿ ನಡೆಯುತ್ತಿವೆ ಇದಕ್ಕೆ ತಾಜಾ ಉದಾಹರಣೆ ಮಾರುಕಟ್ಟೆ ಸಮಿತಿಯ ಮಾಜಿ ಅಧ್ಯಕ್ಷ ಮತ್ತು ಕಾಂಗ್ರೆಸ್ ಮುಖಂಡ ಮೇಜರ್ ಸಿಂಗ್ ಧರಿವಾಲ್ ರನ್ನು ಇಂದು ಹಾಡುಹಗಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ತರನ್ ತರಣ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ಮೇಜರ್ ಸಿಂಗ್ ಧರಿವಾಲ್ ಅವರ ರೆಸಾರ್ಟ್ ಎಸ್‌ಬಿಐನಲ್ಲಿ ಕುಳಿತಿದ್ದಾಗ ಮಹಿಳೆ ಗುಂಡಿನ ದಾಳಿ ನಡೆಸಿದ್ದಾರೆ.
ರೆಸಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಅವರ ಕಚೇರಿಗೆ ನುಗ್ಗಿ ಮೇಜರ್ ಸಿಂಗ್ ಮೇಲೆ ಗುಂಡು ಹಾರಿಸಿದ್ದಾರೆ. ಘಟನೆಯ ನಂತರ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೇಜರ್ ಸಿಂಗ್ ಸಾವನ್ನಪ್ಪಿದ್ದಾರೆ. ಮೃತದೇಹವನ್ನು ನಗರಪಟ್ಟಿ ಠಾಣೆ ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.