ಬೆಂಗಳೂರು:
ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೋವಿಡ್-19ನಿಂದ ಗುಣಮುಖರಾಗಿದ್ದು, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
ಆಗಸ್ಟ್ 4ರಂದು ಕೊರೋನಾ ರೋಗದ ಲಕ್ಷಣವಿಲ್ಲದಿಲ್ಲರೂ ಸಿದ್ದರಾಮಯ್ಯ ಅವರಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ಹೀಗಾಗಿ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಚಿಕಿತ್ಸೆ ನಂತ್ರ ಮತ್ತೆ ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರ ವರದಿ ಕೊರೋನಾ ನೆಗೆಟೀವ್ ಎಂಬುದಾಗಿ ಬಂದಿದೆ.
Former CM and leader of Opposition @siddaramaiah tested negative , he is expected to discharge on Thursday@NewIndianXpress @santwana99 @XpressBengaluru
— Ashwini M Sripad (@AshwiniMS_TNIE) August 12, 2020
ಈ ಕುರಿತಂತೆ ಮಣಿಪಾಲ್ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದು, ಆಗಸ್ಟ್ 4ರಂದು ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದಂತ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಚಿಕಿತ್ಸೆಯ ಬಳಿಕ ಗುಣಮುಖರಾಗಿದ್ದಾರೆ. ಅವರನ್ನು ಮತ್ತೊಮ್ಮೆ ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರ ವರದಿ ನೆಗೆಟಿವ್ ಎಂಬುದಾಗಿ ಬಂದಿದೆ. ಹೀಗಾಗಿ ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿರುವುದಾಗಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
