ಉಡುಪಿ :
ರಾಜ್ಯಸಭಾ ಸದಸ್ಯ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕ ಆಸ್ಕರ್ ಫರ್ನಾಂಡೀಸ್ ಇಹಲೋಕ ತ್ಯಜಿಸಿದ್ದಾರೆ.
ಕಳೆದ ಜುಲೈನಲ್ಲಿ ಮನೆಯಲ್ಲಿ ಯೋಗ ಮಾಡುತ್ತಿದ್ದ ವೇಳೆ ಕೆಳಗೆ ಬಿದ್ದು ಗಾಯಗೊಂಡಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಆ ಬಳಿಕ ಆರೋಗ್ಯ ತಪಾಸಣೆ ವೇಳೆ ಅವರ ತಲೆಗೆ ಪೆಟ್ಟಾಗಿದ್ದು, ಕಂಡುಬಂದಿತ್ತು. ನಂತರ ತೀವ್ರ ನಿಗಾದಲ್ಲಿರಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಮೆದುಳಿಗೆ ಪೆಟ್ಟಾಗಿದ್ದ ಕಾರಣ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಆದರೆ, ಪ್ರಜ್ಞಾಸ್ಥಿತಿಯಲ್ಲಿದ್ದರು. ಇಂದು ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ.
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಸಂಸದೀಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ ಆಸ್ಕರ್, ಹಲವು ಮಹತ್ವದ ಸಂದರ್ಭದಲ್ಲಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲು ರಾಜೀವ್ ಗಾಂಧಿ ಅವರಿಗೆ ಮಹತ್ವದ ಸಲಹೆಗಳನ್ನು ನೀಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
