ಹೊಸದಿಲ್ಲಿ:
ಭಯೋತ್ಪಾದಕರನ್ನು ಸದೆಬಡಿಯಲು ಕೇಂದ್ರ ಸರಕಾರ ತೆಗೆದುಕೊಳ್ಳುವ ಎಲ್ಲ ನಿರ್ಧಾರಗಳಿಗೂ ನಮ್ಮ ಬೆಂಬಲವಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಆರ್‍ಪಿಎಫ್ ಯೋಧರ ವಾಹನದ ಮೇಲೆ ಉಗ್ರರು ನಡೆಸಿರುವ ದಾಳಿಯಲ್ಲಿ ತಾಯ್ನಾಡಿಗಾಗಿ 40 ಯೋಧರು ಹುತಾತ್ಮರಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ನಾವು ರಾಜಕೀಯ ಬೆರೆಸದೆ, ಪ್ರಧಾನಿ ಮೋದಿ ಸರ್ಕಾರ ಈ ವಿಚಾರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಲಿ, ನಮ್ಮ ಬೆಂಬಲ ಇದ್ದೇ ಇರುತ್ತದೆ ಎಂದು. ಕೇಂದ್ರ ಸರ್ಕಾರದ ನಿರ್ಧಾರಕ್ಕೆ ನಾವು ಬದ್ದವಾಗಿದ್ದೇವೆ. ಎಲ್ಲಾ ವಿಪಕ್ಷಗಳು ಸೈನಿಕರ ಜೊತೆಗಿವೆ ಎಂದಿದ್ದಾರೆ.
ಭಾರತದ ಆತ್ಮದ ಮೇಲೆ ಉಗ್ರರ ದಾಳಿ ನಡೆದಿದೆ. ನಾವು ನಮ್ಮ ಯೋಧರನ್ನು ಕಳೆದುಕೊಂಡಿದ್ದೇವೆ. ಸೈನಿಕರ ಮೇಲೆ ಉಗ್ರರು ದಾಳಿ ನಡೆಸಿದ್ದು ಖಂಡನೀಯ. ದೇಶದ ಇತಿಹಾಸದಲ್ಲಿಯೇ ಇದು ಅತ್ಯಂತ ದುಃಖಕರ ಸಂಗತಿ. ಭಯೋತ್ಪಾದನೆ ದೇಶವನ್ನು ವಿಭಜಿಸುತ್ತಿದೆ. ನಾವು ಈ ವಿಭಜನೆಯನ್ನು ವಿರೋಧಿಸುತ್ತೇವೆ. ಯಾರಿಂದಲೂ ದೇಶದ ವಿಭಜನೆ ಸಾಧ್ಯವಿಲ್ಲ ಎಂದಿದ್ದಾರೆ.
ಇಲ್ಲಿ ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುವ ಮೂಲಕ 2 ನಿಮಿಷ ಶ್ರದ್ದಾಂಜಲಿ ಸಲ್ಲಿಸಿದರು. ಇದೇ ವೇಳೆ ರಾಹುಲ್ ಜತೆಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಎ.ಕೆ. ಆಂಟನಿ, ಗುಲಾಂ ನಭಿ ಆಜಾದ್ ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ