ಸ್ಯಾಂಕಿ ಮೇಲ್ಸೇತುವೆ ವಿರೋಧಿಸಿ ಕಾಂಗ್ರೇಸ್‌ ಪ್ರತಿಭಟನೆ…!

ಬೆಂಗಳೂರು: 

      ಸ್ಯಾಂಕಿ ಟ್ಯಾಂಕ್‌ ರಸ್ತೆಯಲ್ಲಿ ಟ್ರಾಫಿಕ್‌ ಸಮಸ್ಯೆ ನಿವಾರಿಸಲು ಮೇಲ್ಸೇತುವೆ ನಿರ್ಮಾಣ ಮಾಡುತ್ತೇವೆ ಎಂದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಪಕ್ಷ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

     ಬಾಷ್ಯಂ ಸರ್ಕಲ್‌ನಲ್ಲಿ ಸ್ಯಾಂಕಿ ಮೇಲ್ಸೇತುವೆ ನಿರ್ಮಾಣ ವಿರೋಧಿಸಿ ಪ್ರತಿಪಕ್ಷ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಹಾಗೂ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳೊಂದಿಗೆ ಸೋಮವಾರ ಪ್ರತಿಭಟನೆ ನಡೆಸಿದರು. ಈ ವೇಳೆ ಕಾಂಗ್ರೆಸ್ ಮುಖಂಡರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ತೆಗೆದುಕೊಳ್ಳಲಾಗಿತ್ತು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ನೇತೃತ್ವದ ಮುಖಂಡರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸ್ಯಾಂಕಿ ರಸ್ತೆ ವಿಸ್ತರಣೆ ಮತ್ತು 60 ಕೋಟಿ ರೂಪಾಯಿ ವೆಚ್ಚದ ಮೇಲ್ಸೇತುವೆ ಕಾಮಗಾರಿಯನ್ನು ನಿಲ್ಲಿಸುವಂತೆ ಒತ್ತಾಯಿಸಿದರು. ಪೊಲೀಸರು ಪ್ರತಿಭಟನಾಕಾರರನ್ನು ಸ್ಥಳದಿಂದ ತೆರಳುವಂತೆ ಎಚ್ಚರಿಸಿದರು, ಆದರೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಮುಂಜಾಗ್ರತಾ ಕ್ರಮವಾಗಿ ಕೆಲವು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ತೆಗೆದುಕೊಂಡರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap