ರಾಜ್ ಘಾಟ್‌ನಲ್ಲಿ ಪ್ರತಿಭಟನೆ ನಡೆಸುವ ಕಾಂಗ್ರೆಸ್ ಮನವಿಯನ್ನು ಕಾನೂನು ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ದೆಹಲಿ ಪೊಲೀಸರು ತಿರಸ್ಕರಿಸಿದ ನಂತರವೂ ಸಂಕಲ್ಪ ಸತ್ಯಾಗ್ರಹ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ನಡೆಯುತ್ತಿದೆ. ಈ ಒಂದು ದಿನದ ‘ಸಂಕಲ್ಪ ಸತ್ಯಾಗ್ರಹ’ ಭಾನುವಾರ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಎಲ್ಲಾ ರಾಜ್ಯಗಳ ಪ್ರಮುಖ ಕೇಂದ್ರಗಳು ಮತ್ತು ಜಿಲ್ಲೆಗಳಲ್ಲಿ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯ ಮುಂದೆ ನಡೆಯಲಿದೆ.
ಸುಮಾರು ಒಂದು ದಶಕದಿಂದ ಪ್ರಮುಖ ವಿರೋಧ ಪಕ್ಷದ ಮುಖ್ಯಸ್ಥರಾಗಿರುವ ನಾಯಕನನ್ನು ಮೌನಗೊಳಿಸಲು ನರೇಂದ್ರ ಮೋದಿ ಸರ್ಕಾರ ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಲಾಗಿದೆ. ಇದೊಂದು “ಪಿತೂರಿ” ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ರಾಜ್‌ಘಾಟ್‌ನಲ್ಲಿ ಸತ್ಯಾಗ್ರಹ ನಡೆಸಲು ಕಾಂಗ್ರೆಸ್‌ಗೆ ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿ ನನ್ನ ಮುಂದಿನ ಭಾಷಣಕ್ಕೆ ಹೆದರಿದ್ದರಿಂದ ನನ್ನನ್ನು ಅನರ್ಹಗೊಳಿ ಸಲಾಗಿದೆ. ನಾನು ಅವರ ಕಣ್ಣುಗಳಲ್ಲಿ ಭಯವನ್ನು ಕಂಡಿದ್ದೇನೆ. ಅದಕ್ಕಾಗಿಯೇ ನಾನು ಸಂಸತ್ತಿನಲ್ಲಿ ಮಾತನಾಡಲು ಅವರು ಬಯಸುವುದಿಲ್ಲ” ಎಂದಿದ್ದಾರೆ. ಕ್ಷಮೆಯಾಚಿಸಬೇಕೆಂಬ ಬಿಜೆಪಿ ಆಗ್ರಹಕ್ಕೆ ಪ್ರತಿಕ್ರಿಯಿಸಿದ ಅವರು, ನನ್ನ ಹೆಸರು ಸಾವರ್ಕರ್ ಅಲ್ಲ, ನಾನು ಗಾಂಧಿ, ನಾನು ಎಂದಿಗೂ ಕ್ಷಮೆ ಕೇಳುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.