ಅನರ್ಹತೆ ವಿರೋಧಿಸಿ ಕಾಂಗ್ರೆಸ್‌ ನಿಂದ ಪ್ರತಿಭಟನೆ…!

ನವದೆಹಲಿ

     ಕಾಂ‌ಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿರುವ ಕ್ರಮವನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು ದೇಶಾದ್ಯಂತ ಸಂಕಲ್ಪ ಸತ್ಯಾಗ್ರಹ ನಡೆಸುತ್ತಿದೆ. ದೆಹಲಿಯಲ್ಲಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.

    ರಾಜ್ ಘಾಟ್‌ನಲ್ಲಿ ಪ್ರತಿಭಟನೆ ನಡೆಸುವ ಕಾಂಗ್ರೆಸ್ ಮನವಿಯನ್ನು ಕಾನೂನು ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ದೆಹಲಿ ಪೊಲೀಸರು ತಿರಸ್ಕರಿಸಿದ ನಂತರವೂ ಸಂಕಲ್ಪ ಸತ್ಯಾಗ್ರಹ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ನಡೆಯುತ್ತಿದೆ.

    ಈ ಒಂದು ದಿನದ ‘ಸಂಕಲ್ಪ ಸತ್ಯಾಗ್ರಹ’ ಭಾನುವಾರ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಎಲ್ಲಾ ರಾಜ್ಯಗಳ ಪ್ರಮುಖ ಕೇಂದ್ರಗಳು ಮತ್ತು ಜಿಲ್ಲೆಗಳಲ್ಲಿ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯ ಮುಂದೆ ನಡೆಯಲಿದೆ.

    ಸುಮಾರು ಒಂದು ದಶಕದಿಂದ ಪ್ರಮುಖ ವಿರೋಧ ಪಕ್ಷದ ಮುಖ್ಯಸ್ಥರಾಗಿರುವ ನಾಯಕನನ್ನು ಮೌನಗೊಳಿಸಲು ನರೇಂದ್ರ ಮೋದಿ ಸರ್ಕಾರ ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಲಾಗಿದೆ. ಇದೊಂದು “ಪಿತೂರಿ” ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ರಾಜ್‌ಘಾಟ್‌ನಲ್ಲಿ ಸತ್ಯಾಗ್ರಹ ನಡೆಸಲು ಕಾಂಗ್ರೆಸ್‌ಗೆ ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

    “ಪ್ರಧಾನಿ ನರೇಂದ್ರ ಮೋದಿ ನನ್ನ ಮುಂದಿನ ಭಾಷಣಕ್ಕೆ ಹೆದರಿದ್ದರಿಂದ ನನ್ನನ್ನು ಅನರ್ಹಗೊಳಿ ಸಲಾಗಿದೆ. ನಾನು ಅವರ ಕಣ್ಣುಗಳಲ್ಲಿ ಭಯವನ್ನು ಕಂಡಿದ್ದೇನೆ. ಅದಕ್ಕಾಗಿಯೇ ನಾನು ಸಂಸತ್ತಿನಲ್ಲಿ ಮಾತನಾಡಲು ಅವರು ಬಯಸುವುದಿಲ್ಲ” ಎಂದಿದ್ದಾರೆ. ಕ್ಷಮೆಯಾಚಿಸಬೇಕೆಂಬ ಬಿಜೆಪಿ ಆಗ್ರಹಕ್ಕೆ ಪ್ರತಿಕ್ರಿಯಿಸಿದ ಅವರು, ನನ್ನ ಹೆಸರು ಸಾವರ್ಕರ್ ಅಲ್ಲ, ನಾನು ಗಾಂಧಿ, ನಾನು ಎಂದಿಗೂ ಕ್ಷಮೆ ಕೇಳುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap