ಬೆಂಗಳೂರು:
ರಾಜ್ಯ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿರುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಮಾಡಲಾಗಿದ್ದು .ಇನ್ನೂ ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗಿದೆ .
ಇಷ್ಟು ದಿನ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವ ಕ್ಷೇತ್ರದಿಂದ ಕಣಕ್ಕಿ ಸ್ಪರ್ಧಿಸುತ್ತಾರೆ ಎಂಬ ಗೊಂದಲಕ್ಕೆ ತೆರೆ ಬಿದ್ದಿದ್ದು, ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯನವರಿಗೆ ಟಿಕೆಟ್ ನೀಡಲಾಗಿದ್ದು. ಆದರೆ ಅವರು ಈ ಹಿಂದೆ ಸ್ಪರ್ಧಿಸುತ್ತೇನೆ ಎಂದು ಘೋಷಿಸಿದ್ದ ಕೋಲಾರ ಮತ್ತು ಅವರು ಈಗ ಶಾಸಕರಾಗಿರುವ ಬಾದಾಮಿ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಇನ್ನೂ ಘೋಷಣೆ ಮಾಡದೆ ಹಾಗೆಯೇ ಇಟ್ಟಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.ಮತ್ತು ಯಾರಿಗೆ ಯಾಆವ ಕ್ಷೇತ್ರ ಎಂಬ ಪಟ್ಟಿ ಇಲ್ಲಿದೆ
ಡಿ.ಕೆ ಶಿವಕುಮಾರ್ ಕನಕಪುರ, ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರ, ಶಾಮನೂರು ಶಿವಶಂಕರಪ್ಪನವರು ದಾವಣಗೆರೆ ದಕ್ಷಿಣ ಕ್ಷೇತ್ರ ಹಾಗೂ ಎಂ. ಬಿ ಪಾಟೀಲ್ ಅವರಿಗೆ ಬಬಲೇಶ್ವರ ಟಿಕೆಟ್ ನೀಡಿ ಪಟ್ಟಿ ಬಿಡುಗಡೆ ಮಾಡಲಾಗಿದೆ. ಚನ್ನಪಟ್ಟಣ ಕ್ಷೇತ್ರದಿಂದ ಯಾರು ಸ್ಪರ್ಧಿಸುತ್ತಾರೆ ಎನ್ನುವ ಕುತೂಹಲ ಇನ್ನೂ ಹಾಗೆಯೇ ಉಳಿದುಕೊಂಡಿದೆ.
