ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ರಿಲೀಸ್‌ ….!

 ಬೆಂಗಳೂರು: 

    ರಾಜ್ಯ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿರುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು  ಬಿಡುಗಡೆಮಾಡಲಾಗಿದ್ದು .ಇನ್ನೂ ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗಿದೆ .

    ಇಷ್ಟು ದಿನ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವ ಕ್ಷೇತ್ರದಿಂದ ಕಣಕ್ಕಿ ಸ್ಪರ್ಧಿಸುತ್ತಾರೆ ಎಂಬ ಗೊಂದಲಕ್ಕೆ ತೆರೆ ಬಿದ್ದಿದ್ದು, ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯನವರಿಗೆ ಟಿಕೆಟ್ ನೀಡಲಾಗಿದ್ದು. ಆದರೆ ಅವರು ಈ ಹಿಂದೆ ಸ್ಪರ್ಧಿಸುತ್ತೇನೆ ಎಂದು ಘೋಷಿಸಿದ್ದ ಕೋಲಾರ ಮತ್ತು ಅವರು ಈಗ ಶಾಸಕರಾಗಿರುವ ಬಾದಾಮಿ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಇನ್ನೂ ಘೋಷಣೆ ಮಾಡದೆ ಹಾಗೆಯೇ ಇಟ್ಟಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.ಮತ್ತು ಯಾರಿಗೆ ಯಾಆವ ಕ್ಷೇತ್ರ ಎಂಬ ಪಟ್ಟಿ ಇಲ್ಲಿದೆ 

    ಡಿ.ಕೆ ಶಿವಕುಮಾರ್​ ಕನಕಪುರ, ಲಕ್ಷ್ಮಿ ಹೆಬ್ಬಾಳ್ಕರ್​ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರ, ಶಾಮನೂರು ಶಿವಶಂಕರಪ್ಪನವರು  ದಾವಣಗೆರೆ ದಕ್ಷಿಣ ಕ್ಷೇತ್ರ ಹಾಗೂ ಎಂ. ಬಿ ಪಾಟೀಲ್​ ಅವರಿಗೆ ಬಬಲೇಶ್ವರ ಟಿಕೆಟ್ ನೀಡಿ ಪಟ್ಟಿ ಬಿಡುಗಡೆ ಮಾಡಲಾಗಿದೆ. ಚನ್ನಪಟ್ಟಣ ಕ್ಷೇತ್ರದಿಂದ ಯಾರು ಸ್ಪರ್ಧಿಸುತ್ತಾರೆ ಎನ್ನುವ ಕುತೂಹಲ ಇನ್ನೂ ಹಾಗೆಯೇ ಉಳಿದುಕೊಂಡಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap