ಜೈಪುರ:
ಕರ್ನಾಟಕದಲ್ಲಿ ಬಿಜೆಪಿ ಸೋಲಿಸಿದ ಮಾತ್ರಕ್ಕೆ ಕಾಂಗ್ರೆಸ್ ಸಂತೃಪ್ತರಾಗಬಾರದು, ಏಕೆಂದರೆ ರಾಜ್ಯ ಮತ್ತು ರಾಷ್ಟ್ರೀಯ ಚುನಾವಣೆಗಳ ನಡುವೆ ಮತದಾರ ನಡವಳಿಕೆಯಲ್ಲಿ ಬದಲಾಗಬಹುದು ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.
ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ವಿಧಾನಸಭಾ ಚುನಾವಣೆಗಳಲ್ಲಿ ಜಯಗಳಿಸಿದ ನಂತರ 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಕಳಪೆ ಪ್ರದರ್ಶನದ ಅಂಶವನ್ನು ಅವರು ಒತ್ತಿ ಹೇಳಿದ್ದಾರೆ.
ಸಾಹಿತ್ಯ ಉತ್ಸವ ಸಮಾರೋಪ ಸಮಾರಂಭ ವೇಳೆ ಪಿಟಿಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಶಶಿ ತರೂರ್ , ಒಂದು ರಾಜ್ಯದಲ್ಲಿ ಗೆದ್ದ ಮಾತ್ರಕ್ಕೆ ಅದು ರಾಷ್ಟ್ರೀಯವಾಗಿ ಕೆಲಸ ಮಾಡಬಹುದು ಎಂದು ಊಹಿಸಲು ಸಾಧ್ಯವಿಲ್ಲ. 2018ರಲ್ಲಿ ಕರ್ನಾಟಕದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದಲ್ಲದೇ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ ಘಡ ಚುನಾವಣೆಯಲ್ಲೂ ಗೆಲುವು ಸಾಧಿಸಿದ್ದೇವು.ಆದರೆ, ಲೋಕಸಭಾ ಚುನಾವಣೆಯಲ್ಲಿ ಈ ರಾಜ್ಯಗಳಲ್ಲಿ ಬಿಜೆಪಿ ನಮಗೆ ತಿರುಗೇಟು ನೀಡಿತ್ತು. ಕರ್ನಾಟಕದಲ್ಲೂ ಕೇವಲ ಒಂದೇ ಒಂದೇ ಸ್ಥಾನ ನಮಗೆ ಸಿಕ್ಕಿತ್ತು ಎಂದು ಹೇಳಿದರು.
