ನಿವೃತ್ತಿ ಕುರಿತು ಮೋದಿ ಟೀಕಿಸಿದ ಕಾಂಗ್ರೆಸ್….!

ನವದೆಹಲಿ: 

    ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್  ಬುಧವಾರ ನಾಯಕರು, 75 ವರ್ಷ ವಯಸ್ಸಿನಲ್ಲಿ ಪಕ್ಷ ಬಿಡಬೇಕು ಎಂದು ಹೇಳಿದ್ದು, ಈ ಹೇಳಿಕೆ ಪ್ರಧಾನಿ ನರೇಂದ್ರ ಮೋದಿಗೆ  ಅನ್ವಯವಾಗುವುದಿಲ್ಲವೇ ಎಂದು ಕಾಂಗ್ರೆಸ್ ಟೀಕಿಸಿದೆ. ಪ್ರಧಾನಿ ಮೋದಿ ಮತ್ತು ಭಾಗವತ್ ಇಬ್ಬರಿಗೂ ಸೆಪ್ಟೆಂಬರ್‌ನಲ್ಲಿ 75 ವರ್ಷ ತುಂಬಲಿದೆ. ನಾಗ್ಪುರದಲ್ಲಿ ದಿವಂಗತ ಆರ್‌ಎಸ್‌ಎಸ್ ಸಿದ್ಧಾಂತವಾದಿ ಮೊರೋಪಂತ್ ಪಿಂಗ್ಲೆ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮೋಹನ್ ಭಾಗವತ್ ಈ ಹೇಳಿಕೆ ನೀಡಿದ್ದಾರೆ.

    ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿ, ಆರ್‌ಎಸ್‌ಎಸ್ ಮುಖ್ಯಸ್ಥರೇ 75 ವರ್ಷದ ನಂತರದವರು ರಾಜಕೀಯ ನಿವೃತ್ತಿ ಹೊಂದಬೇಕು ಎನ್ನುತ್ತಾರೆ. ಆದರೆ ಪ್ರಧಾನಿ ವಿದೇಶ ಪ್ರವಾಸ ಮಾಡುತ್ತಿರುತ್ತಾರೆ ಎಂದು ಟೀಕಿಸಿದ್ದಾರೆ. ಆದಾಗ್ಯೂ, ಪ್ರಧಾನಿಯವರು ಆರ್‌ಎಸ್‌ಎಸ್ ಮುಖ್ಯಸ್ಥರಿಗೆ ಸೆಪ್ಟೆಂಬರ್ 11 ರಂದು 75 ವರ್ಷ ತುಂಬುತ್ತಾರೆ ಎಂಬುದನ್ನು ನೆನಪಿಸಬಹುದು ಎಂದು ರಮೇಶ್ ಬರೆದಿದ್ದಾರೆ. “ಒಂದು ಬಾಣ, ಎರಡು ಗುರಿಗಳು ಎಂದು ಅವರು ಬರೆದುಕೊಂಡಿದ್ದಾರೆ.

   ಪವನ್ ಖೇರಾ ಕೂಡ ಪ್ರಧಾನಿ ಮೋದಿ ಅವರನ್ನು ಟೀಕಿಸಿದರು. “ಈಗ ನೀವಿಬ್ಬರೂ ಬ್ಯಾಗ್ ಎತ್ತಿಕೊಂಡು ಒಬ್ಬರಿಗೊಬ್ಬರು ಮಾರ್ಗದರ್ಶನ ಮಾಡಿಕೊಳ್ಳಿ ಎಂದು ಹೇಳಿದ್ದಾರೆ. ನಾಗ್ಪುರದಲ್ಲಿ ದಿವಂಗತ ಆರ್‌ಎಸ್‌ಎಸ್ ಸಿದ್ಧಾಂತವಾದಿ ಮೊರೋಪಂತ್ ಪಿಂಗ್ಲೆ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮೋಹನ್ ಭಾಗವತ್ ಈ ಹೇಳಿಕೆ ನೀಡಿದ್ದಾರೆ. 75 ವರ್ಷದ ಶಾಲನ್ನು ಒಬ್ಬ ವ್ಯಕ್ತಿಯ ಮೇಲೆ ಹೊದಿಸಿದರೆ, ಅವರು ಒಂದು ನಿರ್ದಿಷ್ಟ ವಯಸ್ಸನ್ನು ತಲುಪಿದ್ದಾರೆ ಮತ್ತು ಅವರು ಪಕ್ಕಕ್ಕೆ ಸರಿದು ಇತರರಿಗೆ ಕೆಲಸ ಮಾಡಲು ಅವಕಾಶ ನೀಡಬೇಕು ಎಂಬ ಪಿಂಗ್ಲೆ ಅವರ ಹೇಳಿಕೆಯನ್ನು ಆರ್‌ಎಸ್‌ಎಸ್ ಮುಖ್ಯಸ್ಥರು ನಿರ್ದಿಷ್ಟವಾಗಿ ಉಲ್ಲೇಖಿಸಿದ್ದಾರೆ. 

  ಮಾರ್ಚ್‌ನಲ್ಲಿ ಪ್ರಧಾನಿ ಮೋದಿ ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಪ್ರಧಾನ ಕಚೇರಿಗೆ ಭೇಟಿ ನೀಡಿದ್ದರು, ಇದು ಹಲವು ವರ್ಷಗಳ ನಂತರ ಅವರ ಮೊದಲ ಭೇಟಿಯಾಗಿತ್ತು. ಆ ಸಮಯದಲ್ಲಿ, ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಅವರು ಪ್ರಧಾನಿ ತಮ್ಮ ನಿವೃತ್ತಿಯನ್ನು ಘೋಷಿಸಲು ಈ ಭೇಟಿ ನೀಡಿದ್ದರು ಎಂದು ಹೇಳಿದ್ದರು.

Recent Articles

spot_img

Related Stories

Share via
Copy link