ಮೈಸೂರು
ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13 ರಂದು ಉಪಚುನಾವಣೆ ನಡೆಯಲಿದೆ. ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ಕಣ ಜಿದ್ದಾಜಿದ್ದಿಯಿಂದ ಕೂಡಿದೆ. ಸಂಡೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ನಿರೀಕ್ಷೆಯಂತೆ ಸಂಸದ ಇ ತುಕಾರಾಂ ಅವರ ಪತ್ನಿ ಅನ್ನಪೂರ್ಣ ಅವರಿಗೆ ಸಿಗುವುದು ಪಕ್ಕಾ ಆಗಿದೆ.
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಸಂಡೂರು ಕ್ಷೇತ್ರದಲ್ಲಿ ಸಂಸದ ಇ ತುಕಾರಾಂ ಪತ್ನಿ ಅನ್ನಪೂರ್ಣ ಅವರಿಗೆ ಟಿಕೆಟ್ ಕೊಡುತ್ತೇವೆ. ಉಳಿದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿ ಫೈನಲ್ ಮಾಡುತ್ತೇವೆ ಎಂದು ಹೇಳಿದ್ದಾರೆ.
