ಬೆಂಗಳೂರು:
ರಷ್ಯಾ -ಉಕ್ರೇನ್ ಯುದ್ಧದ ಪರಿಣಾಮದಿಂದಾಗಿ ಸೂರ್ಯಕಾಂತಿ ಎಣ್ಣೆ ದರ 175 ರೂಪಾಯಿವರೆಗೆ ಏರಿಕೆಯಾಗಿದ್ದು, ಯುದ್ಧ ಮುಂದುವರೆದಲ್ಲಿ ಸೂರ್ಯಕಾಂತಿ ಎಣ್ಣೆ ದರ ಮತ್ತಷ್ಟು ದುಬಾರಿಯಾಗಿ 200 ರೂ.ವರೆಗೂ ತಲುಪುವ ಸಾಧ್ಯತೆಯಿದೆ.
ಮಾರುಕಟ್ಟೆಯಲ್ಲಿ ಸೂರ್ಯಕಾಂತಿ ಎಣ್ಣೆ ದರ 40 ರೂ.ನಷ್ಟು ಏರಿಕೆ ಕಂಡಿದೆ
ಇದರ ಪರಿಣಾಮ ಹಲವು ಕಡೆಗಳಲ್ಲಿ ಅಡುಗೆ ಎಣ್ಣೆ ಖರೀದಿಗೆ ಗ್ರಾಹಕರಿಗೆ ಮಿತಿ ಹೇರಲಾಗಿದೆ. ಯುದ್ಧದ ಕಾರಣದಿಂದಾಗಿ ಸೂರ್ಯಕಾಂತಿ ಎಣ್ಣೆ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ದರ ಇನ್ನಷ್ಟು ಏರಿಕೆಯಾಗಬಹುದು ಎಂದು ಹೇಳಲಾಗಿದೆ.
ಯುದ್ಧದ ಹೆಸರಲ್ಲಿ ಕಾಳಸಂತೆಕೋರರು ಅಡುಗೆ ಎಣ್ಣೆ ದಾಸ್ತಾನು ಮಾಡಿಕೊಳ್ಳತೊಡಗಿದ್ದು, ಕೃತಕ ಅಭಾವ ಸೃಷ್ಟಿಸಿ ಬೆಲೆ ಏರಿಕೆ ಮಾಡತೊಡಗಿದ್ದಾರೆ ಎನ್ನಲಾಗಿದೆ. ದರ ಇನ್ನಷ್ಟು ಏರಿಕೆಯಾಗಬಹುದು ಎನ್ನುವ ಕಾರಣಕ್ಕೆ ಅನೇಕರು ಸೂರ್ಯಕಾಂತಿ ಎಣ್ಣೆ ಖರೀದಿಗೆ ಮುಗಿಬಿದ್ದಿದ್ದು ಕೂಡ ಬೆಲೆ ಏರಿಕೆಗೆ ಕಾರಣವಾಗಿದೆ. ಹೀಗಾಗಿ ಕೆಲವೆಡೆ ಖರೀದಿಗೆ ಮಿತಿ ಹೇರಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ