ನವದೆಹಲಿ
ಕೇಂದ್ರ ವಿಮಾನಯಾನ ಸಚಿವ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಜ್ಯೋತಿರಾದಿತ್ಯ ಸಿಂಧ್ಯಾ ಅವರು ಕೊರೋನಾ ಪಾಸಿಟಿವ್ ಆಗಿದ್ದಾರೆ. ಈ ಬಗ್ಗೆ ಅವರು ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ.
ವೈದ್ಯರ ಸಲಹೆಯ ಮೇರೆಗೆ ಮಾಡಿಸಲಾದ ಕೋವಿಡ್ -19 ಪರೀಕ್ಷೆಯಲ್ಲಿ ನನ್ನ ವರದಿಯು ಪಾಸಿಟಿವ್ ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರಿಗೂ ನಾನು ವಿನಂತಿಸುತ್ತೇನೆ. ನೀವೆಲ್ಲರೂ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಿ ಅಥವಾ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಹೋಗಿ ಮತ್ತು ನಿಮ್ಮನ್ನು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಿಂಧಿಯಾ ಟ್ವಿಟರ್‌ನಲ್ಲಿ ಬರೆದಿದ್ದಾರೆ.
