ನವದೆಹಲಿ:
ಕಳೆದ ವರ್ಷ ನವೆಂಬರ್ 18 ರಂದು ದೇಶದಲ್ಲಿ 656 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದವು.ರಾಷ್ಟ್ರೀಯ ಕೋವಿಡ್-19 ಚೇತರಿಕೆ ದರ 98.80ರಷ್ಟಿದ್ದು, ಈವರೆಗೆ 4,41,56,970 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ದೈನಂದಿನ ಮರಣ ಪ್ರಮಾಣ ಶೇ 1.19ರಷ್ಟಿದೆ.
117 ದಿನಗಳ ಬಳಿಕ ಇದೇ ಮೊದಲ ಬಾರಿಗೆ 24 ಗಂಟೆಗಳ ಅವಧಿಯಲ್ಲಿ 600ಕ್ಕೂ ಅಧಿಕ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.
ಇದೇ ಅವಧಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,197ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಐವರು ಸಾವಿಗೀಡಾಗಿದ್ದು, ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ 5,30,789ಕ್ಕೆ ಏರಿಕೆಯಾಗಿದೆ. ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಕರ್ನಾಟಕದಲ್ಲಿ ಇಬ್ಬರು ಸಾವಿಗೀಡಾಗಿದ್ದರೆ, ಮಹಾರಾಷ್ಟ್ರದಲ್ಲಿ ಎರಡು ಮತ್ತು ಉತ್ತರಾಖಂಡದಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ.