ಬೆಂಗಳೂರು :
ಕೋವಿಡ್ ನಿಂದ ಕುಟುಂಬದ ಹಿರಿಯರು ಮೃತಪಟ್ಟರೆ ಅಂತಹ ಕುಟುಂಬದವರಿಗೆ 1 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.
ಈ ಕುರಿತು ಘೋಷಣೆ ಮಾಡಿದ ಅವರು, ಕುಟುಂಬದಲ್ಲಿ ದುಡಿಯುವ ವ್ಯಕ್ತಿ ಮೃತಪಟ್ಟರೆ ಒಂದು ಕುಟುಂಬದಲ್ಲಿ ಒಬ್ಬರಿಗೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಹೇಳಿದರು.
ಕೋವಿಡ್ ಸೋಂಕಿಗೆ ಕುಟುಂಬದಲ್ಲಿ ಅಪ್ರಾಪ್ತರು ಬಲಿಯಾಗಿದ್ದರೆ ಪರಿಹಾರ ಸಿಗುವುದಿಲ್ಲ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದಲ್ಲಿ ವಯಸ್ಕರು ಮೃತಪಟ್ಟಿದ್ದರೆ ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ 1 ಲಕ್ಷ ರೂ. ಪರಿಹಾರ ಸಿಗಲಿದೆ.
ಈ ಕುರಿತ ವಿವರವಾದ ಮಾರ್ಗಸೂಚಿ ಇನ್ನೂ ಪ್ರಕಟವಾಗಬೇಕಿದೆ. ದೇಶದಲ್ಲಿಯೇ ಇಂತಹ ಘೋಷಣೆಯನ್ನು ಮಾಡಿರುವ ಮೊದಲ ರಾಜ್ಯ ಕರ್ನಾಟಕವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ