ಬೆಂಗಳೂರು :
ರಾಜ್ಯ ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ದರವನ್ನು ಫಿಕ್ಸ್ ಮಾಡಿದೆ.
ರಾಜ್ಯದಲ್ಲಿ ದಿನೇ ದಿನ ಕೊರೋನಾ ಅಬ್ಬರ ಜೋರಾಗಿದೆ. ಕೊರೋನಾ 2ನೇ ಅಲೆಯ ಅಬ್ಬರದಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ಕೂಡ ಏರಿಕೆಯಾಗಿದೆ. ಹೀಗಾಗಿ ಕೊರೋನಾ ಸೋಂಕಿತರು ಚಿಕಿತ್ಸೆಗಾಗಿ ಪರದಾಡುವಂತ ಪರಿಸ್ಥಿತಿ, ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಚಿಕಿತ್ಸಾ ದರ ವಸೂಲಿಯಂತ ಸಮಸ್ಯೆ ಎದುರಿಸುವಂತಾಗಿದೆ.
ಇದೀಗ ರಾಜ್ಯ ಸರ್ಕಾರ ಇದಕ್ಕೆ ಬ್ರೇಕ್ ಹಾಕಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ದರವನ್ನು ಫಿಕ್ಸ್ ಮಾಡಿದೆ. ರಾಜ್ಯ ಸರ್ಕಾರ ನಿಗದಿಪಡಿಸಿರುವಂತ ದರದಂತೆ ಚಿಕಿತ್ಸಾ ವೆಚ್ಚ ಪಡೆಯುವಂತೆಯೂ ಸೂಚಿಸಲಾಗಿದೆ.
ಜನರಲ್ ವಾರ್ಡ್ 5,200 ರು. 10,000ರು.
ಆಮ್ಲಜನಕ ಸೌಲಭ್ಯದ ವಾರ್ಡ್ 7,000 ರು. 12,000 ರು.
ಐಸಿಯು 8,500 ರು. 15,000 ರು.
ವೆಂಟಿಲೇಟರ್ ಇರುವ ಐಸಿಯು 10,000 ರು. 25,000 ರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ