ಗುಜರಾತ್‌ನಲ್ಲಿ ಓರ್ವನಿಗೆ ಕೊರೋನವೈರಸ್ ರೂಪಾಂತರ XE ಸೋಂಕು ದೃಢ: ವರದಿ

ನವದೆಹಲಿ:

ನವದೆಹಲಿ, ಏ.9- ಹೋದೆ ಗವಾಕ್ಷಿ ಎಂದರೆ ಬಂದೆ ಪಿಶಾಚಿ ಎನ್ನುವಂತೆ ಇನ್ನೇನು ದೇಶದಿಂದ ಕೊರೊನಾ ಮಹಾಮಾರಿ ಹೋಗೆಬಿಟ್ಟಿತು ಎಂದು ಜನತೆ ನಿಟ್ಟುಸಿರು ಬಿಡುವ ಹೊತ್ತಿಗೆ ಮತ್ತೊಂದು ಆಘಾತಕಾರಿ ಸುದ್ದಿ ಎದುರಾಗಿದೆ. ಸದ್ಯ ವಿದೇಶಗಳಲ್ಲಿ ಕಾಣಿಸಿಕೊಂಡಿರುವ ಹೊಸ ಮಾದರಿಯ ಎಕ್ಸ್ ಇ ಎಂಬ ಸೋಂಕು ಗುಜರಾತ್‍ನಲ್ಲಿ ವ್ಯಕ್ತಿಯೊಬ್ಬನಿಗೆ ಕಾಣಿಸಿಕೊಂಡಿದ್ದು, ಇದು ನಾಲ್ಕನೇ ಅಲೆಯ ಮುನ್ಸೂಚನೆಯೇ ಎಂಬ ಪ್ರಶ್ನೆ ಎದುರಾಗಿದೆ.

ಮೂರು ದಿನಗಳ ಹಿಂದೆಯಷ್ಟೇ ಮುಂಬೈನಲ್ಲಿ ಇದೇ ಮಾದರಿಯ ಸೋಂಕು ವ್ಯಕ್ತಿಯೊಬ್ಬರಲ್ಲಿ ಕಾಣಿಸಿಕೊಂಡಿತ್ತು. ಆದರೆ ದೃಢಪಟ್ಟಿರಲಿಲ್ಲ. ಈಗ ಗುಜರಾತ್‍ನಲ್ಲಿ ಕಾಣಿಸಿಕೊಂಡಿರುವುದು ಜನತೆಯಲ್ಲಿ ಭೀತಿ ಹುಟ್ಟಿಸಿದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಹೊಸ ಮಾದರಿಯ ಎಕ್ಸ್ ಇ ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ವೇಗವಾಗಿ ಹಬ್ಬುತ್ತದೆ ಎಂದು ಎಚ್ಚರಿಸಿದೆ. ಆದರೆ ಕೇಂದ್ರ ಸರ್ಕಾರ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಜನತೆ ಗೊಂದಲಕ್ಕೆ ಒಳಗಾಗಬಾರದೆಂದು ಸಲಹೆ ಮಾಡಿದೆ.

ಹೈವೋಲ್ಟೇಜ್ ಪಂದ್ಯದಲ್ಲಿ ಯಾರಿಗೆ ಸಿಗಲಿದೆ ಗೆಲುವು ? ಆರ್ ಸಿಬಿ – ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ ಇಲೆವೆನ್

ಗುಜರಾತ್‍ನ ವ್ಯಕ್ತಿಯೊಬ್ಬರಿಗೆ ಕಳೆದ ವಾರ ಸೋಂಕು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗ ಇದು ದೃಢಪಟ್ಟಿದ್ದು, ಅಲ್ಲಿನ ಸರ್ಕಾರ ಅಧಿಕೃತವಾಗಿ ಬಹಿರಂಗಪಡಿಸಿಲ್ಲ. ನಾವು ಕೆಲವು ಸ್ಯಾಂಪಲ್‍ಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದೆವು. ಇದರಲ್ಲಿ ಹೊಸ ಮಾದರಿಯ ಸೋಂಕು ಇರುವುದು ದೃಢಪಟ್ಟಿದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಆದರೂ ನಿಯಮಗಳ ಪ್ರಕಾರ ನಾವು ಇದನ್ನು ಖಚಿತಪಡಿಸುವಂತಿಲ್ಲ. ಕೇಂದ್ರ ಸರ್ಕಾರಕ್ಕೆ ಇದನ್ನು ಕಳುಹಿಸಿಕೊಟ್ಟಿದ್ದೇವೆ. ನಂತರವೇ ಇದು ದೃಢಪಡಲಿದೆ ಎಂದಿದ್ದಾರೆ.ಭಾರತದಲ್ಲಿ ಕೆಲವು ತಿಂಗಳ ಹಿಂದೆ ಕಾಣಿಸಿಕೊಂಡಿದ್ದ ಓಮಿಕ್ರಾನ್ ಸೋಂಕಿಗಿಂತಲೂ ಇದು ವೇಗವಾಗಿ ಹಬ್ಬುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಮದ್ದೂರು ಪೋಲೀಸರ ಕಾರ್ಯಾಚರಣೆ : ಹುಲಿ ಉಗುರುಗಳನ್ನು ಮಾರಾಟ ಮಾಡುತ್ತಿದ್ದ 3 ಆರೋಪಿಗಳ ಬಂಧನ

ಆದರೆ ಒಂದು ಸಮಾಧಾನಕರ ವಿಷಯವೆಂದರೆ ಈ ಸೋಂಕಿನಿಂದ ಮಾನವನ ಆರೋಗ್ಯದ ಮೇಲೆ ಹೆಚ್ಚಿನ ದುಷ್ಪರಿಣಾಮ ಬೀರುವುದಿಲ್ಲ. ಆದರೂ ಮುಂಜಾಗ್ರತಾ ಕ್ರಮಗಳನ್ನು ಸಾರ್ವಜನಿಕರು ತೆಗೆದುಕೊಳ್ಳಬೇಕು. ನಿರ್ಲಕ್ಷ್ಯ ವಹಿಸುವುದು ಬೇಡ ಎಂದು ಸಲಹೆ ನೀಡಿದೆ.

ರಾಜ್ಯಗಳಿಗೆ ಪತ್ರ: ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಏರಿಕೆ ಆಗುತ್ತಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರ ಬರೆದಿದ್ದಾರೆ. ಕಳೆದ ವಾರ ಕೊವಿಡ್-19 ಸೋಂಕಿತ ಪ್ರಕರಣಗಳು ಹೆಚ್ಚಾಗಿರುವ ದೆಹಲಿ, ಹರಿಯಾಣ, ಕೇರಳ, ಮಹಾರಾಷ್ಟ್ರ ಮತ್ತು ಮಿಜೋರಾಂ ರಾಜ್ಯಗಳ ಆರೋಗ್ಯ ಕಾರ್ಯದರ್ಶಿಗಳ ಜೊತೆಗೆ ಭೂಷಣ್ ಸಭೆ ನಡೆಸಲಿದ್ದಾರೆ.

ಮಹಿಳಾ ಸ್ವಸಹಾಯ ಸಂಘಗಳ ನೆರವಿಗೆ ಆಯಂಕರ್ ಬ್ಯಾಂಕ್ ಸ್ಥಾಪನೆ: ಸಿಎಂ ಬೊಮ್ಮಾಯಿ

ಈ ನಡುವೆ ಚೀನಾ, ಅಮೆರಿಕ ಮತ್ತು ಯುರೋಪ್ ನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿರುವ ನಡುವೆಯೇ ಇಂದು ಕೇಂದ್ರ ಸರ್ಕಾರ ಐದು ರಾಜ್ಯಗಳಿಗೆ ಕೋವಿಡ್ ಹೆಚ್ಚಳವಾಗುತ್ತಿರುವ ಬಗ್ಗೆ ಎಚ್ಚರಿಸಿದ್ದು, ಮುಂಜÁಗ್ರತಾ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದೆ.

ಭಾರತದಲ್ಲಿನ ಕೆಲವು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಆರ್ಥಿಕ ಮತ್ತು ಸಾಮಾಜಿಕ ಚಟುವಟಿಕೆಗಳ ಪುನರಾರಂಭಕ್ಕೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ವಿವಿಧ ರೀತಿಯ ಕ್ರಮಗಳನ್ನು ತೆಗೆದುಕೊಂಡಿತ್ತು. ಈ ನಿಟ್ಟಿನಲ್ಲಿ ಕೋವಿಡ್ 19 ಸೋಂಕು ನಿರ್ವಹಣೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕಾದ ಅಗತ್ಯವಿದೆ ಎಂದು ಭೂಷಣ್ ಪತ್ರದಲ್ಲಿ ತಿಳಿಸಿರುವುದಾಗಿ ವರದಿ ಹೇಳಿದೆ.

ಮಸ್ತಾನ್‌ ದರ್ಗಾಕ್ಕೂ ತೆರಳಲಿದೆ ಕರಗ: ಕರಗ ಸಮಿತಿ, ದರ್ಗಾ ಸಮಿತಿ ಸ್ಪಷ್ಟನೆ

18 ವರ್ಷ ಮೇಲ್ಪಟ್ಟ ಎಲ್ಲರಿಗೂ ಬೂಸ್ಟರ್ ಡೋಸ್:

ದೇಶದ ಖಾಸಗಿ ಆಸ್ಪತ್ರೆಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರೂ ಏಪ್ರಿಲ್ 10 ರಿಂದ ಕೋವಿಡ್-19 ಬೂಸ್ಟರ್ ಲಸಿಕೆಯನ್ನು ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಘೋಷಿಸಿದೆ. 18 ವರ್ಷ ಮೇಲ್ಪಟ್ಟ ನೀವು ಎರಡನೇ ಡೋಸ್ ಪಡೆದು 9 ತಿಂಗಳು ಆಗಿದ್ದರೆ, ಬೂಸ್ಟರ್ ಡೋಸ್ ಪಡೆದುಕೊಳ್ಳುವುದಕ್ಕೆ ಅರ್ಹರಾಗಿರುತ್ತೀರಿ.

ಡೀಲ್​ಗೆ ವಾಟ್ಸ್​ಆಯಪ್​ ಸಾಕ್ಷ್ಯ; ಸಹಾಯಕ ಪ್ರಾಧ್ಯಾಪಕ ಪರೀಕ್ಷೆಗೂ ಮೊದಲೇ ಪ್ರಶ್ನೆಪತ್ರಿಕೆ ಸೋರಿಕೆ

ಭಾರತದಲ್ಲಿ ಶೇ.96ರಷ್ಟು ಮಂದಿಗೆ ಮೊದಲ ಡೋಸ್:

ದೇಶದಲ್ಲಿ 15 ವರ್ಷ ಮೇಲ್ಪಟ್ಟವರಲ್ಲಿ ಶೇ.96ರಷ್ಟು ಮಂದಿ ಮೊದಲ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. ಅದೇ ರೀತಿ 15 ವರ್ಷ ಮೇಲ್ಪಟ್ಟ ಶೇ.83ರಷ್ಟು ಫಲಾನುಭವಿಗಳು ಎರಡೂ ಡೋಸ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ.

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿದೆ. ಕೊವಿಡ್-19 ಲಸಿಕೆ ವಿತರಣೆ ಪ್ರಾರಂಭವಾಗಿ 447 ದಿನಗಳೇ ಕಳೆದಿದ್ದು, ಇದುವರೆಗೂ 185 ಕೋಟಿ ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap