ಉಡುಪಿ:
ಕರ್ನಾಟಕ ಸರ್ಕಾರದಲ್ಲಿ ಭ್ರಷ್ಟಾಚಾರ ಉತ್ತುಂಗದಲ್ಲಿದೆ ಎಂದು ರಾಜ್ಯದ ಪಕ್ಷ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಶುಕ್ರವಾರ ಹೇಳಿದ್ದಾರೆ. ನೌಕರಿ ಪಡೆಯಲು ಪದವಿ ಬೇಕಿಲ್ಲ, ಸರ್ಕಾರಕ್ಕೆ ಲಂಚ ಕೊಡಲು ಆಸ್ತಿ ಇರಬೇಕು ಎಂಬ ಭಾವನೆಯನ್ನು ಬಿಜೆಪಿ ಜನರಲ್ಲಿ ಬೆಳೆಸುತ್ತಿದೆ ಎಂದು ದೂರಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಮೂಗಿನ ನೇರಕ್ಕೆ ಭ್ರಷ್ಟಾಚಾರ ನಡೆಯುತ್ತಿರುವುದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಅವರು, ಬೊಮ್ಮಾಯಿ ಸರ್ಕಾರದಲ್ಲಿನ ಭ್ರಷ್ಟಾಚಾರದ ಪ್ರಮಾಣದ ಬಗ್ಗೆ ಸಂಪೂರ್ಣ ವರದಿ ಮತ್ತು ಭ್ರಷ್ಟಾಚಾರದ ಆರೋಪಗಳ ಬಗ್ಗೆ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಿಂದ ತನಿಖೆ ನಡೆಸುವಂತೆ ಕೋರಿದರು.
ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ 40 ಲಕ್ಷ ರೂಪಾಯಿಯೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದನ್ನು ನಾವು ನೋಡಿದ್ದೇವೆ ಎಂದು ದೂರಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ