ಬೆಂಗಳೂರು : ಕರಗಕ್ಕೆ ಕ್ಷಣಗಣನೆ….!

ಬೆಂಗಳೂರು:

    ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯೋತ್ಸವವು ಸೋಮವಾರ ಮಧ್ಯರಾತ್ರಿ ವಿಜೃಂಭಣೆಯಿಂದ ಜರುಗಲಿದ್ದು, ಕರಗಕ್ಕೆ ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

    ಇಂದು ರಾತ್ರಿ 10ಕ್ಕೆ ತಿಗಳರಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಧ್ವಜಾರೋಹಣ ಆರಂಭವಾಗಲಿದೆ. ಉತ್ಸವದಲ್ಲಿ ಸಂಪ್ರದಾಯದಂತೆ ಜರಗನಹಳ್ಳಿಯ ಕುಲಬಾಂಧವರು ಪ್ರತಿ ವರ್ಷದಂತೆ ಬಿದಿರಿನ ಮರವನ್ನು ತರಲಿದ್ದು, ಅದನ್ನು ದೇವಾಲಯದ ಆವರಣದಲ್ಲಿ ನೆಟ್ಟು, ಸೋಮವಾರ ರಾತ್ರಿ ರಥೋತ್ಸವ ಹಾಗೂ ಧ್ವಜಾರೋಹಣ ಮಾಡುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಗುವುದು. ಹೀಗೆ ಚೈತ್ರಮಾಸ ಶುಕ್ಲ ಪಕ್ಷದ ಸಪ್ತಮಿ ದಿನ ಆರಂಭವಾಗಿ ಬಿಡಿಗೆವರೆಗೆ ಉತ್ಸವ ಜರುಗಲಿದೆ. ಏ.23ರ ಚೈತ್ರ ಪೌರ್ಣಮ ದಿನವಾದ ಮಂಗಳವಾರ ಶ್ರೀ ಧರ್ಮರಾಯಸ್ವಾಮಿ ಮಹಾರಥೋತ್ಸವ ಹಾಗೂ ಕರಗ ಶಕ್ತ್ಯೋತ್ಸವ ವಿಜೃಂಭಣೆಯಿಂದ ಜರುಗಲಿದೆ.

    ಕರಗ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸತೀಶ್ ಅವರು ಮಾತಾಡಿ ಈ ಬಾರಿಯೂ ಮಸ್ತಾನ್ ಸಾಭ್ ದರ್ಗಕ್ಕೆ ಕರಗ ಹೋಗೆ ಹೋಗುತ್ತದೆ. ಮೊದಲಿನಿಂದಲು ಇರುವ ಸಂಪ್ರದಾಯದಂತೆ ಕರಗ ನಡೆಯಲಿದೆ ಯಾವುದೇ ಸಂಪ್ರದಾಯಗಳನ್ನು ಕಡಿತಗೊಳಿಸಲಾಗುವುದಿಲ್ಲ ಶಾಂತಿ ಸೌಹಾರ್ದದಿಂದ ಕರಗ ಉತ್ಸವ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

    ಈ ಬಾರಿ ವೀರಕುಮಾರರಿಗೆ ಕೆಂಪು ವಸ್ತ್ರ. ಹಾಗೂ ಮೈಸೂರು ಪೇಟ ಹಾಗೂ ದೀಕ್ಷೆ ಪಡೆಯುವರಿಗೆ ಖಡ್ಗ ನೀಡಲು ಮುಂದಾಗಿದ್ದೇವೆ. ಸುಮಾರು 800 ವರ್ಷಗಳ ಇತಿಹಾಸ ಇರೋ ಕರಗ ಉತ್ಸವ ನಾಡಪ್ರಭು ಕೆಂಪೇಗೌರ ಕಾಲದಿಂದಲು ಅಚರಣೆ ಮಾಡಿಕೊಂಡು ಬರಲಾಗುತ್ತಿದೆ. ಈ ಬಾರಿ ಜ್ಞಾನೇಂದ್ರ ರವರು 13 ನೇ ಬಾರಿ ಕರಗ ಹೊರುವರು, ರಾಜ್ಯ ಸೇರಿದಂತೆ ವಿದೇಶದಿಂದಲು ಈ ಉತ್ಸವ ನೋಡಲು ಲಕ್ಷಾಂತರ ಭಕ್ತಾಧಿಗಳು ಬರಲಿದ್ದಾರೆ.

    ಇಂದಿನಿಂದ 9 ದಿನಗಳವರೆಗೆ ಪ್ರತಿನಿತ್ಯ ಅಮ್ಮನಿಗೆ ವಿವಿಧ ಬಗ್ಗೆಯ ಪೂಜೆ ಮಾಡುತ್ತೇವೆ, ಏಪ್ರೀಲ್ 23 ರ ರಾತ್ರಿ 12 ಗಂಟೆಗೆ ಬೆಂಗಳೂರು ಕರಗ ನಡೆಯಲಿದೆ, ಇನ್ನೂ ಈ ಉತ್ಸವಕ್ಕೆ ರಾಜ್ಯದ ಗಣ್ಯರು ಸೇರಿದಂತೆ ಮಠಾಧೀಶರು ಅಗಮಿಸುವ ನಿರೀಕ್ಷೆಗಳಿವೆ. ಈ ಬಾರಿ ಬಿಸಿಲಿನ ತಾಪಾಮಾನ ಹೆಚ್ಚಾಗಿರುವುದರಿಂದ ಎಲ್ಲರಿಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ.

    ತಮಿಳುನಾಡು ಸೇರಿದಂತೆ ಹಲವು ಕಡೆಗಳಿಂದ 200 ಮಂದಿ ಹೂವು ಸಿದ್ಧಪಡಿಸುವ ತಂಡ ಆಗಮಿಸಿದ್ದು, ಕರಗಕ್ಕೆ ಸೇಲಂ ಮೊಗ್ಗನ್ನು ಬಳಕೆ ಮಾಡುವುದು ರೂಢಿ. ಹೀಗಾಗಿ ಕರಗ ಮುಗಿಯುವವರೆಗೆ ಪ್ರತಿದಿನ ಸೇಲಂನಿಂದ ಮಲ್ಲಿಗೆ ಮೊಗ್ಗು ಬೆಂಗಳೂರಿಗೆ ಪೂರೈಕೆ ಆಗಲಿದೆ. ಮೈಸೂರು ಮಲ್ಲಿಗೆಯನ್ನೂ ಬಳಸಲಾಗುತ್ತದೆ. ಈ ಬಾರಿ ಕೇರಳದಿಂದ ಸಾಂಸ್ಕೃತಿಕ ತಂಡ ಕೂಡ ಆಗಮಿಸಲಿದೆ ಎಂದು ಮಾಹಿತಿ ನೀಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap