ಕೇಜ್ರಿವಾಲ್‌ ಜಾಮೀನು ಅರ್ಜಿ : ಅರ್ಜಿದಾರನಿಗೆ 75000 ದಂಡ ವಿಧಿಸಿದ ಹೈಕೋರ್ಟ್‌

ನವದೆಹಲಿ:

    ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿಯಿಂದ ಬಂಧಿತರಾಗಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನುನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ನ್ನು ದೆಹಲಿ ಹೈಕೋರ್ಟ್‌ ಸೋಮವಾರ ತಿರಸ್ಕರಿಸಿದ್ದು, ಅರ್ಜಿದಾರನಿಗೆ 75,000 ರೂಪಾಯಿ ದಂಡ ವಿಧಿಸಿದೆ.

    ದೆಹಲಿ ಸಿಎಂ ಅವರ ಅಧಿಕಾರಾವಧಿ ಮುಗಿಯುವವರೆಗೆ ಅಥವಾ ಅವರ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಯುವವರೆಗೆ ಅವರಿಗೆ ಜಾಮೀನು ಒದಗಿಸಬೇಕೆಂದು ಅರ್ಜಿಯಲ್ಲಿ ವಿನಂತಿಸಲಾಗಿತ್ತು.

   ಈ ಅರ್ಜಿಯನ್ನು ತಿರಸ್ಕರಿಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್‌ ಮತ್ತು ನ್ಯಾಯಮೂರ್ತಿ ಮನಮೀತ್‌ ಪ್ರೀತಂ ಸಿಂಗ್‌ ಅರೋರಾ ಅವರ ವಿಭಾಗೀಯ ಪೀಠ, ಅರ್ಜಿಯನ್ನು ಯಾವುದೇ ಆಧಾರವಿಲ್ಲದೆ ಸಲ್ಲಿಸಲಾಗಿದೆ. ಪಿಐಎಲ್‌ ಸಲ್ಲಿಸಲು ಕೇಜ್ರಿವಾಲ್‌ ಅಧಿಕಾರ ನೀಡಿದ ಪವರ್‌ ಆಫ್‌ ಅಟಾರ್ನಿಯನ್ನು ಅರ್ಜಿದಾರರು ಹೊಂದಿಲ್ಲ ಎಂದು ಹೇಳಿದ ನ್ಯಾಯಾಲಯ ಅರ್ಜಿದಾರನಿಗೆ ರೂ 75,000 ವೆಚ್ಚಗಳನ್ನು ಪಾವತಿಸುವಂತೆ ಆದೇಶಿಸಿದೆ. 

   ಈ ಪಿಐಎಲ್‌ ಅನ್ನು “ವಿ, ದಿ ಪೀಪಲ್‌ ಆಫ್‌ ಇಂಡಿಯಾ” ಎಂಬ ಹೆಸರಿನಲ್ಲಿ ಸಲ್ಲಿಸಲಾಗಿತ್ತಲ್ಲದೆ. ತಮಗೆ ಯಾವುದೇ ಪ್ರಚಾರ ಬೇಡ ಎಂದು ಹೇಳಿ ಹೆಸರು ಬಳಸಿಲ್ಲ, ತಾವು ದೆಹಲಿ ಜನರನ್ನು ಪ್ರತಿನಿಧಿಸುತ್ತಿರುವುದಾಗಿ ಅರ್ಜಿದಾರ ಹೇಳಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap