ನವದೆಹಲಿ:
ದೆಹಲಿ ಕೋರ್ಟ್ ಕೇಂದ್ರೀಯ ತನಿಖಾ ದಳ (ಸಿಬಿಐ) ಕ್ಕೆ ದೆಹಲಿ ಸಿಎಂ ಕೇಜ್ರಿವಾಲ್ ನ್ನು ಬಂಧಿಸುವುದಕ್ಕೆ ಅನುಮತಿ ನೀಡಿದೆ. ಅಬಕಾರಿ ಹಗರಣದಲ್ಲಿ ಸಿಬಿಐ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲು ಮುಂದಾಗಿತ್ತು.
ಕೋರ್ಟ್ ಆದೇಶ ಬರುತ್ತಿದ್ದಂತೆಯೇ ಸಿಬಿಐ ಕೇಜ್ರಿವಾಲ್ ಅವರನ್ನು ಬಂಧಿಸಿದೆ. ಎಎಪಿ ನಾಯಕನನ್ನು ತಿಹಾರ್ ಕೇಂದ್ರ ಕಾರಾಗೃಹದಿಂದ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಕೇಂದ್ರ ತನಿಖಾ ಸಂಸ್ಥೆ ಬಂಧನಕ್ಕೆ ಅರ್ಜಿಯನ್ನು ಸಲ್ಲಿಸಿತ್ತು.
ಸಿಎಂ ಅರವಿಂದ್ ಕೇಜ್ರಿವಾಲ್ ರೂ.100 ಕೋಟಿ ಲಂಚಕ್ಕೆ ಬೇಡಿಕೆ: ಕೋರ್ಟ್ ಗೆ ED ಮಾಹಿತಿ
ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ಅಬಕಾರಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಜೈಲಿನಲ್ಲಿದ್ದಾರೆ.








