ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಲಾಗುವುದು : ಸಿಎಂ

ಬೆಂಗಳೂರು

    ಸೆಪ್ಟೆಂಬರ್ 26 ರಂದು ಅಂದರೆ ನಾಳೆ ಸರ್ವೋಚ್ಚ ನ್ಯಾಯಾಲಯದ ಮುಂದೆ ಕಾವೇರಿ ನೀರಿನ ವಿಷಯ ವಿಚಾರಣೆಗೆ ಬರಲಿದ್ದು. ನಮ್ಮ ವಾದವನ್ನು ಇನ್ನಷ್ಟು ಬಲವಾಗಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

     ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರು ಹರಿಸುವ ಬಗ್ಗೆ ಸರ್ವೋಚ್ಚ ನ್ಯಾಯಾಲಯದ ಆದೇಶ ಇದೆ. ನೀರು ಹರಿಸಲು ಸಾಧ್ಯವಿಲ್ಲ ಎಂದು ವಾದ ಮಂಡಿಸಲಾಗಿದೆ. ನಮ್ಮ ಅರ್ಜಿ ವಜಾ ಆಗಿದ್ದು, ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ನಿರ್ವಹಣಾ ಪ್ರಾಧಿಕಾರ ಎರಡರ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದೆವು.

     ಸುಪ್ರೀಂಕೋರ್ಟ್ ನಮ್ಮ ಹಾಗೂ ತಮಿಳುನಾಡಿನ ಅರ್ಜಿಯನ್ನು ತಿರಸ್ಕಾರ ಮಾಡಿದೆ. ತಮಿಳುನಾಡು 24,000 ಕ್ಯೂಸೆಕ್ಸ್ ನೀರು ಕೇಳಿದ್ದರು. ನಂತರ 7200 ಕ್ಯೂಸೆಕ್ಸ್ ಕೇಳಿದರು. ನಾವು 5000 ಕ್ಯೂಸೆಕ್ಸ್ ನೀರು ಕೂಡ ಕೊಡಲಾಗುವುದಿಲ್ಲ. ನಮ್ಮ ಬಳಿ ನೀರಿಲ್ಲ ಎಂದು ವಾದಿಸಿದ್ದು, ಅದನ್ನು ನ್ಯಾಯಾಲಯ ಒಪ್ಪಿಲ್ಲ ಎಂದರು.

     ಕಾವೇರಿ ನೀರಿನ ಸಂಬಂಧ ನಾಳೆ ಬೆಂಗಳೂರು ಬಂದ್ ಹಾಗೂ ನಾಡಿದ್ದು ಕರ್ನಾಟಕ ಬಂದ್ ಕರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಭಟನೆಗೆ ಅವಕಾಶವಿದೆ. ಅದನ್ನು ನಾವು ಹತ್ತಿಕ್ಕಲು ಹೋಗುವುದಿಲ್ಲ ಎಂದು ತಿಳಿಸಿದರು.,

Recent Articles

spot_img

Related Stories

Share via
Copy link
Powered by Social Snap