ನವದೆಹಲಿ:
ದೆಹಲಿ ಮಾಜಿ ಡಿಸಿಎಂ ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐನಿಂದ ಬಂಧಿತರಾಗಿದ್ದರು . ಇನ್ನೂ ಕೋರ್ಟ್ ಸಿಬಿಐ ಕಸ್ಟಡಿ ಅವಧಿಯನ್ನು ಮಾರ್ಚ್ 6ರವರೆಗೆ ವಿಸ್ತರಿಸಿ ಆದೇಶ ನೀಡಿದೆ.
ಐದು ದಿನಗಳ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಧೀಶ ಎಂಕೆ ನಾಗ್ ಪಾಲ್ ಅವರ ಮುಂದೆ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಇಂದು ಹಾಜರುಪಡಿಸಿತು.ಕಸ್ಟಡಿ ಅವಧಿಯನ್ನು ವಿಸ್ತರಿಸುವಂತೆ ಕೇಂದ್ರೀಯ ತನಿಖಾ ಸಂಸ್ಥೆ ನ್ಯಾಯಾಧೀಶರ ಬಳಿ ಮನವಿ ಮಾಡಿದ ಹಿನ್ನೆಲೆಯಲ್ಲಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯ, ಇನ್ನೆರೆಡು ದಿನ ಸಿಬಿಐ ಕಸ್ಟಡಿಗೆ ಒಪ್ಪಿಸಿತು.
ರೋಸ್ ಅವಿನ್ಯೂ ಕೋರ್ಟ್ ಆವರಣದ ಒಳಗೆ ಹಾಗೂ ಹೊರಗೆ ಭಾರೀ ಭದ್ರತೆ ಕಲ್ಪಿಸಲಾಗಿತ್ತು. ಕೋರ್ಟ್ ಆವರಣದ ಹೊರಗೆ ಭಾರೀ ಸಂಖ್ಯೆಯಲ್ಲಿ ನೆರೆದಿದ್ದ ಆಮ್ ಆದ್ಮಿ ಪಕ್ಷದ ಬೆಂಬಲಿಗರು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ