ಬೆಂಗಳೂರು ಪಶ್ಚಿಮ ವಿಭಾಗದಲ್ಲಿ 60 ಪೊಲೀಸ್ ಸಿಬ್ಬಂದಿಗೆ ಕೊರೊನಾ ಶಾಕ್

ಬೆಂಗಳೂರು:

ಜ. 10: ಕೋವಿಡ್ ನಿಯಮಗಳನ್ನು ಜಾರಿಗೆ ತರುವ ಜತೆಗೆ ಕಾನೂನು ಸುವ್ಯವಸ್ಥೆ ಪಾಲನೆ ಮಾಡುತ್ತಿರುವ ಪೊಲೀಸರಿಗೆ ಕೊರೊನಾ ಆತಂಕ ಶುರುವಾಗಿದೆ.

ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಕೊರೊನಾ ಸೋಂಕಿಗೆ ತುತ್ತಾಗುತ್ತಿದ್ದಾರೆ. ಪಶ್ಚಿಮ ವಿಭಾಗದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಸೇರಿದಂತೆ 60 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವ ಆತಂಕಕಾರಿ ಸಂಗತಿ ಹೊರ ಬಿದ್ದಿದೆ.

     ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯು ಜತೆಗೆ ಕಾನೂನು ಸುವ್ಯವಸ್ಥೆಯಲ್ಲಿ ತೊಡಗಿಸಿಕೊಂಡಿರುವ ಪೊಲೀಸ್ ಸಿಬ್ಬಂದಿ ದಿನ ನಿತ್ಯ ಸಾರ್ವಜನಿಕರ ಮಧ್ಯೆ ಕೆಲಸ ಮಾಡುತ್ತಿದ್ದಾರೆ. ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ್ದು ಆತಂಕ ಮನೆ ಮಾಡಿದೆ.

ಪಶ್ಚಿಮ ವಿಭಾಗವೊಂದರಲ್ಲಿ ಈವರೆಗೂ 60 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಅದರಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಹಾಗೂ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ ಕೂಡ ಸೇರಿದ್ದು ಒಂದೇ ದಿನ ಹನ್ನೆರಡು ಮಂದಿ ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇದು ಪೊಲೀಸ್ ವಲಯದಲ್ಲಿ ಆತಂಕ ಮನೆ ಮಾಡಿದೆ.

ಕೆಲ ದಿನಗಳ ಹಿಂದಷ್ಟೇ ಕೆ.ಆರ್. ಮಾರ್ಕೆಟ್ ಪೊಲೀಸ್ ಠಾಣೆಯ 12 ಸಿಬ್ಬಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಇದೀಗ ಮೂರೇ ದಿನದಲ್ಲಿ ಒಂದು ವಿಭಾಗದಲ್ಲಿ 60 ಸಿಬ್ಬಂದಿ ಕೊರೊನಾ ಸೋಂಕಿಗೆ ಗುರಿಯಾಗಿದ್ದಾರೆ. ಇದು ಇಡೀ ಪೊಲೀಸ್ ವಯಲದಲ್ಲಿ ಚರ್ಚೆಗೆ ನಾಂದಿ ಹಾಡಿದೆ.

ಪಶ್ಚಿಮ ವಿಭಾಗದಲ್ಲಿ 60 ಪೊಲೀಸ್ ಸಿಬ್ಬಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಪೊಲೀಸ್ ಸಿಬ್ಬಂದಿಗೂ ಈ ಪರಿ ಸೋಂಕು ಹರಡುತ್ತಿರುವುದು ಆತಂಕ ಮನೆ ಮಾಡಿಸಿದೆ. ಎಲ್ಲಾ ಪೊಲೀಸ್ ಸಿಬ್ಬಂದಿಗೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಜತೆಗೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಸೂಚಿಸಲಾಗಿದೆ.

ಇನ್ನು ಪೊಲೀಸ್ ಸಿಬ್ಬಂದಿಗೆ ಯಾವ ಮಾದರಿಯ ವೈರಸ್ ಕಾಣಿಸಿಕೊಂಡಿದೆ ಎಂಬುದರ ಬಗ್ಗೆ ಇನ್ನೂ ಮಾಹಿತಿ ಬಂದಿಲ್ಲ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಎಂ. ಪಾಟೀಲ್ ಒನ್‌ಇಂಡಿಯಾ ಕನ್ನಡಕ್ಕೆ ತಿಳಿಸಿದ್ದಾರೆ.

ಬೆಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಎಂಟು ಉಪ ವಿಭಾಗದಲ್ಲಿ 110 ಕ್ಕೂ ಹೆಚ್ಚು ಕಾನೂನು ಸುವ್ಯವಸ್ಥೆ ಕಾಪಾಡುವ ಪೊಲೀಸ್ ಠಾಣೆಗಳಿವೆ.

ಸಂಚಾರ ವಿಭಾಗದ ಎರಡು ಉಪ ವಿಭಾಗಗಳಿದ್ದು, ಸಾವಿರಾರು ಪೊಲೀಸ್ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೊರೊನಾ ಮೂರನೇ ಅಲೆ ಪೊಲೀಸರಲ್ಲಿ ಕಾಣಿಸಿಕೊಂಡಿದ್ದು, ಪೊಲೀಸರು ಅತಂಕಕ್ಕೀಡಾಗಿದ್ದಾರೆ.

ಕೊರೊನಾ ಬರುತ್ತದೆ ಎಂದು ಕರ್ತವ್ಯದಿಂದ ವಿಮುಖರಾಗಲು ಸಾಧ್ಯವಿಲ್ಲ. ಕರ್ತವ್ಯ ನಿರ್ವಹಿಸಲೇಬೇಕು. ಕೊರೊನಾ ಬಂದರೂ ಕೆಲಸ ಮಡಬೇಕು. ಕೊರೊನಾ ಬಾರದಿದ್ದರೂ ಕೆಲಸ ಮಾಡಲೇಬೇಕು.

ಇರುವುದರಲ್ಲಿ ಎಚ್ಚರಿಕೆಯಿಂದ ಕೆಲಸ ಮಾಡಲು ಅಧಿಕಾರಿಗಳು ಸೂಚಿಸಿದ್ದಾರೆ ಎಂದು ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯೊಬ್ಬರು ಒನ್ ಇಂಡಿಯಾ ಕನ್ನಡಕ್ಕೆ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link