ರಾಜ್ಯ ಸರ್ಕಾರ ಕೊರೋನಾ ನಿಯಂತ್ರಣಕ್ಕಾಗಿ ನೈಟ್ ಕರ್ಪ್ಯೂ ( Night Curfew ) ಹಾಗೂ ವೀಕೆಂಡ್ ಕರ್ಪ್ಯೂ ( Weekend Curfew ) ಜಾರಿಗೊಳಿಸಿದೆ. ಈ ಆದೇಶಕ್ಕೆ ಬಿಜೆಪಿಯ ಅನೇಕ ಶಾಸಕರು, ಸಚಿವರು, ಕೇಂದ್ರ ಸಚಿವರು ಆಕ್ಷೇಪ ವ್ಯಕ್ತ ಪಡಿಸಿದ್ದರು.
ಈ ಹಿನ್ನಲೆಯಲ್ಲಿ ನಾಳೆ ಮಧ್ಯಾಹ್ನ 1 ಗಂಟೆಗೆ ಮಹತ್ವದ ಕೋವಿಡ್ ನಿಯಂತ್ರಣ ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ವೀಕೆಂಡ್ ಕರ್ಪ್ಯೂ ಆದೇಶ ವಾಪಾಸ್ ನಿರ್ಧರವನ್ನು ಸಿಎಂ ಬೊಮ್ಮಾಯಿ ಪ್ರಕಟಿಸಲಿದ್ದಾರೆ.
ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ವೀಕೆಂಡ್ ಕರ್ಪ್ಯೂ ಜಾರಿಯಲ್ಲಿದೆ. ಈಗಾಗಲೇ 2 ವಾರ ಮುಕ್ತಾಯಗೊಂಡು ಈ ವಾರ ಜಾರಿಯಾದ್ರೇ ಮೂರನೇ ವಾರದ ವೀಕೆಂಡ್ ಕರ್ಪ್ಯೂ ನಡೆಯಲಿದೆ.
ಕೊರೋನಾ ನಿಯಂತ್ರಣಕ್ಕಾಗಿ ಸರ್ಕಾರ ಜಾರಿಗೊಳಿಸಿರುವಂತ ವೀಕೆಂಡ್ ಕರ್ಪ್ಯೂ ಬಗ್ಗೆ ವ್ಯಾಪಾರಿಗಳು ತೀವ್ರ ವಿರೋಧ ವ್ಯಕ್ತ ಪಡಿಸಿದ್ದರು. ಜೊತೆಗೆ ಶಾಸಕರು, ಸಚಿವರು, ಕೇಂದ್ರ ಸಚಿವರು ಕೂಡ ಆಕ್ಷೇಪಿಸಿದ್ದರು
ಈ ಎಲ್ಲಾ ಹಿನ್ನಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರ ( CM Basavaraj Bommai ) ನೇತೃತ್ವದಲ್ಲಿ ನಾಳೆ ಮಧ್ಯಾಹ್ನ 1 ಗಂಟೆಗೆ ಮಹತ್ವದ ಕೋವಿಡ್ ನಿಯಂತ್ರಣ ಸಭೆಯನ್ನು ಕರೆಯಲಾಗಿದೆ.
ಈ ಸಭೆಯಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಸಚಿವರು ಸೇರಿದಂತೆ ಅನೇಕ ತಜ್ಞರು ಭಾಗಿಯಾಗಲಿದ್ದಾರೆ. ಈ ಸಭೆಯಲ್ಲಿ ವೀಕೆಂಡ್ ಕರ್ಪ್ಯೂ ಮುಂದುವರೆಸೋ, ರದ್ದು ಪಡಿಸೋ ಬಗ್ಗೆ ತೀರ್ಮಾನವನ್ನು ಕೂಡ ಕೈಗೊಳ್ಳಲಾಗುತ್ತದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ