ಮಾಜಿ ಪ್ರಧಾನಿ, ಹೆಚ್‌ಡಿ ದೇವೇಗೌಡರಿಗೆ ಕೋವಿಡ್‌ ಪಾಸಿಟಿವ್‌

ಬೆಂಗಳೂರು :

           ದೇವೇಗೌಡರು ಹಿರಿಯ ನಾಯಕರು, ಮಾಜಿ ಪ್ರಧಾನಿಗಳು ಸಾಮಾನ್ಯವಾಗಿ ಅವರು ಈ ವಯಸ್ಸಿನಲ್ಲಿಯೂ ಆರೋಗ್ಯ ಚೆನ್ನಾಗಿ ಇರಿಸಿಕೊಂಡಿದ್ದಾರೆ. ಆದರೆ, ಕೊರೊನಾ ಯಾರನ್ನು ಬಿಟ್ಟಿಲ್ಲ.

ಈಗ ಅವರಿಗೆ ಸೋಂಕು ತಗುಲಿದೆ. ಆದರೂ ಅವರಿಗೆ ಸೋಂಕಿನ ತೀವ್ರತೆ ಇರಲಿಕ್ಕಿಲ್ಲ. ಮಣಿಪಾಲ ಆಸ್ಪತ್ರೆಗೆ ಅವರು ದಾಖಲಾಗಿದ್ದು, ಆಸ್ಪತ್ರೆ ವೈದ್ಯರ ಜೊತೆ ಮಾತನಾಡುತ್ತೇನೆ.

ಅವರ ಕುಟುಂಬ ಸದಸ್ಯರ ಜೊತೆಯೂ ಮಾತನಾಡುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ..

 ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅವರು ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗೌಡರು ನಿನ್ನೆ ಪರೀಕ್ಷೆಗೆ ಒಳಪಟ್ಟಿದ್ದು, ಕೊರೊನಾ ಸೋಂಕು ದೃಢಪಟ್ಟಿದೆ. ಪಾಸಿಟಿವ್ ಬಂದಿದ್ದರೂ ದೇವೇಗೌಡರು ಆರೋಗ್ಯವಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಕೋವಿಡ್ ಎರಡನೇ ಅಲೆಯಲ್ಲೂ ದೇವೇಗೌಡರಿಗೆ ಕೋವಿಡ್‌ ಪಾಸಿಟಿವ್‌ ಬಂದಿತ್ತು. ಆಗಲೂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಎರಡು ಡೋಸ್ ಕೋವಿಡ್ ಲಸಿಕೆ ಕೂಡ ದೇವೇಗೌಡರು ಪಡೆದಿದ್ದಾರೆ.

ಕಳೆದ ಮೂರು ದಿನಗಳ ಹಿಂದೆಯಷ್ಟೇ ಗೌಡರು ಪಕ್ಷದ ಕಚೇರಿ ಜೆಪಿ ಭವನದಲ್ಲಿ ಪಕ್ಷದ ಮುಖಂಡರ ಸಭೆಯಲ್ಲಿ ಭಾಗವಹಿಸಿದ್ದರು. ಗೌಡರು ಶೀಘ್ರವಾಗಿ ಗುಣಮುಖರಾಗಲಿ ಎಂದು ಜೆಡಿಎಸ್ ಪಕ್ಷದ ನಾಯಕರು, ಮುಖಂಡರು, ಕಾರ್ಯಕರ್ತರು ಹಾರೈಸಿದ್ದಾರೆ.

ಗೌಡರು ಕೋವಿಡ್​​ನಿಂದ ಚೇತರಿಸಿಕೊಳ್ಳಲಿ : ದೇವೇಗೌಡರು ಹಿರಿಯ ನಾಯಕರು, ಮಾಜಿ ಪ್ರಧಾನಿಗಳು ಸಾಮಾನ್ಯವಾಗಿ ಅವರು ಈ ವಯಸ್ಸಿನಲ್ಲಿಯೂ ಆರೋಗ್ಯ ಚೆನ್ನಾಗಿ ಇರಿಸಿಕೊಂಡಿದ್ದಾರೆ. ಆದರೆ, ಕೊರೊನಾ ಯಾರನ್ನು ಬಿಟ್ಟಿಲ್ಲ. ಈಗ ಅವರಿಗೆ ಸೋಂಕು ತಗುಲಿದೆ.

ಆದರೂ ಅವರಿಗೆ ಸೋಂಕಿನ ತೀವ್ರತೆ ಇರಲಿಕ್ಕಿಲ್ಲ. ಮಣಿಪಾಲ ಆಸ್ಪತ್ರೆಗೆ ಅವರು ದಾಖಲಾಗಿದ್ದು, ಆಸ್ಪತ್ರೆ ವೈದ್ಯರ ಜೊತೆ ಮಾತನಾಡುತ್ತೇನೆ. ಅವರ ಕುಟುಂಬ ಸದಸ್ಯರ ಜೊತೆಯೂ ಮಾತನಾಡುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಸುದ್ದಿ ತಿಳಿಯಿತು. ಅವರು ಆದಷ್ಟು ಬೇಗ ಸಂಪೂರ್ಣ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ ಹೇಳಿದ್ದಾರೆ.

ದೇವೇಗೌಡರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ಬಳಿ ಸಂಪರ್ಕದಲ್ಲಿದ್ದು, ಅವರ ಆರೋಗ್ಯದ ಬಗ್ಗೆ ನಿರಂತರ ಮಾಹಿತಿ ಪಡೆಯುತ್ತೇನೆ ಎಂದು ತಿಳಿಸಿದ್ದಾರೆ.

                   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link