ಬೆಂಗಳೂರು :
ರಾಜ್ಯದಲ್ಲಿ ಇನ್ನೂ 2-3 ವಾರಗಳಲ್ಲಿ ಕೊರೊನಾ ಸೋಂಕು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ಜಿಲ್ಲೆಗಳಲ್ಲಿ ಕೊರೊನಾ ಹೊಸ ಪ್ರಕರಣಗಳು ಏರಿಕೆಯಾಗುತ್ತಿವೆ.
2-3 ವಾರಗಳಲ್ಲಿ ಕೊರೊನಾ ಸೋಂಕು ಕಡಿಮೆಯಾಗಲಿದೆ. ಸದ್ಯ ಸೋಂಕು ಪ್ರಕರಣಗಳಿಂದ ಆಸ್ಪತ್ರೆ ದಾಖಲಾತಿಗೆ ಹೆಚ್ಚು ಗಮನ ನೀಡಲಾಗಿದೆ. ಸದ್ಯ ಆಸ್ಪತ್ರೆ ದಾಖಲಾತಿ ಕಡಿಮೆ ಇದ್ದು, ಒಂದು ವೇಳೆ ಹೆಚ್ಚಾದ್ರೆ ನಿರ್ಬಂಧ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ರಾಜ್ಯದಲ್ಲಿ ಜನವರಿಯಲ್ಲಿ 32 ಲಕ್ಷ ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ. ಯಾವ ರಾಜ್ಯವೂ ಇಷ್ಟು ಅಧಿಕ ಸಂಖ್ಯೆಯಲ್ಲಿ ಪರೀಕ್ಷೆ ಮಾಡಿಲ್ಲ ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ