ರಾಜ್ಯದಲ್ಲಿ ಕೊರೋನಾ ಏರಿಳಿತ: ಮಹಾಮಾರಿಗೆ ಇಂದು 81 ಬಲಿ, ಬೆಂಗಳೂರಿನಲ್ಲಿ 8850 ಸೇರಿ 20505 ಮಂದಿಗೆ ಪಾಸಿಟಿವ್

ಬೆಂಗಳೂರು:

 ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 20505 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 38,44,338ಕ್ಕೆ ಏರಿಕೆಯಾಗಿದೆ.

     ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಬರೋಬ್ಬರಿ 81 ಮಂದಿ ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 39137ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 8850 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,36,425ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೋನಾದಿಂದ 13 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 40903 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 36,27,925ಕ್ಕೆ ಏರಿಕೆಯಾಗಿದೆ. ಇನ್ನು 177244 ಸಕ್ರೀಯ ಪ್ರಕರಣಗಳಿವೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap