ಒಂದೇ ದಿನದಲ್ಲಿ 1 ಲಕ್ಷದ 17 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ

ನವದೆಹಲಿ:

ದೇಶಾದ್ಯಂತ ಕೊರೊನಾ ಸೋಂಕು ಸ್ಫೋಟಗೊಂಡಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,17,100 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ದಿನದ ಕೋವಿಡ್ ಪಾಸಿಟಿವ್ ರೇಟ್ ಶೇ.7.74ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 302 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 483178 ಕ್ಕೆ ಏರಿಕೆಯಾಗಿದೆ.

    ಇನ್ನು ದೇಶದಲ್ಲಿ 371363 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 30836 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34371845 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 15,13,377 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 94,47,056 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,49,66,81,156 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link