ಬೆಂಗಳೂರು:
ಕ್ರೇಜಿಸ್ಟಾರ್ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ ಸೋಮವಾರ ನಿಧನರಾದರು.
ಪಟ್ಟಮ್ಮಾಳ್ ಅವರಿಗೆ 83 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಪಟ್ಟಮ್ಮಾಳ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಸೋಮವಾರ ಬೆಳಗ್ಗೆ ಕೊನೆಯುಸಿರೆಳೆದರು.
ಬೆಳಗ್ಗೆ 10.30ರ ವೇಳೆಗೆ ರವಿಚಂದ್ರನ್ ಅವರ ಮನೆಗೆ ಪಾರ್ಥೀವ ಶರೀರವನ್ನು ತರಲಾಗುತ್ತದೆ. ಸಂಜೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ